ಬಾಗಿಲು ಮುಚ್ಚಿದ ಕಾರು ತಯಾರಿಕಾ ‘ಫೋರ್ಡ್’ ಸಂಸ್ಥೆ | ಎಷ್ಟು ಉದ್ಯೋಗಿಗಳು ನಿರುದ್ಯೋಗಿಗಳಾಗಲಿದ್ದಾರೆ ಗೊತ್ತಾ? - Mahanayaka

ಬಾಗಿಲು ಮುಚ್ಚಿದ ಕಾರು ತಯಾರಿಕಾ ‘ಫೋರ್ಡ್’ ಸಂಸ್ಥೆ | ಎಷ್ಟು ಉದ್ಯೋಗಿಗಳು ನಿರುದ್ಯೋಗಿಗಳಾಗಲಿದ್ದಾರೆ ಗೊತ್ತಾ?

ford
10/09/2021

ನವದೆಹಲಿ: ಪ್ರತಿಷ್ಟಿತ ಆಟೋ ಮೊಬೈಲ್ ಸಂಸ್ಥೆ ಫೋರ್ಡ್, ಭಾರತದಲ್ಲಿನ ತನ್ನ ಎರಡು ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಭಾರತದಲ್ಲಿನ ತಯಾರಿಕಾ ಘಟಕ ಲಾಭದಾಯವಾಗಿಲ್ಲ ಎಂದು ಸಂಸ್ಥೆ ಹೇಳಿದೆ. ಹೀಗಾಗಿ ಈ ಘಟಕಗಳಲ್ಲಿ ದುಡಿಯುತ್ತಿರುವ ಭಾರತದ ಉದ್ಯೋಗಿಗಳು ನಿರುದ್ಯೋಗಿಗಳಾಗಲಿದ್ದಾರೆ.

ಫೋರ್ಡ್ ಮಸ್ಟಾಂಗ್ ಮತ್ತು ಮುಂದಿನಿ ದಿನಗಳಲ್ಲಿ ಬರುವ ಹೈಬ್ರಿಡ್, ಎಲೆಕ್ಟ್ರಿಕ್ ವಾಹನಗಳನ್ನು ಆಮದು ಮೂಲಕ ಮಾರಾಟ ಮುಂದುವರಿಸುವುದಾಗಿ ಫೋರ್ಡ್ ಸಂಸ್ಥೆ ಹೇಳಿದೆ. ಹಾಲಿ ಗ್ರಾಹಕರಿಗೆ ಅಗತ್ಯ ಸೇವೆಗಳನ್ನು ಒದಗಿಸಲು ಡೀಲರ್ ಗಳಿಗೆ ಬೆಂಬಲ ನೀಡುವುದಾಗಿಯೂ ಸಂಸ್ಥೆ ಭರವಸೆ ನೀಡಿದೆ.

ಇನ್ನೂ ಫೋರ್ಡ್ ಸಂಸ್ಥೆಯ ಫಿಗೋ, ಅಸ್ವೈರ್, ಫ್ರೀಸ್ಟ್ರೈಲ್, ಇಕೋಸ್ಪೋರ್ಟ್ ಮತ್ತು ಎಂಡೇವರ್ ಕಾರುಗಳ ಮಾರಾಟ ಡೀಲರ್ ಗಳ ಬಳಿ ಇರುವ ಸ್ಟಾಕ್ ಗಳು ಮುಗಿಯುವವರೆಗೆ ಮುಂದುವರಿಯಲಿದೆ ಎಂದು ಸಂಸ್ಥೆಯ ತಿಳಿಸಿದೆ.

1994ರಲ್ಲಿ ಭಾರತದ ಮಾರುಕಟ್ಟೆ ಪ್ರವೇಶಿಸಿದ್ದ ಫೋರ್ಡ್ ಇದೀಗ 27 ವರ್ಷಗಳ ಬಳಿಕ ಭಾರತದಲ್ಲಿ ತನ್ನ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ. ಫೋರ್ಡ್ ಸಂಸ್ಥೆಯು ಭಾರತದಲ್ಲಿ ಹೂಡಿಕೆ ಮಾಡಿದ್ದ 2.5 ಬಿಲಿಯನ್ ಡಾಲರ್ ನಷ್ಟ ಅನುಭವಿಸಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಘಟಕಗಳನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ 4 ಸಾವಿರಕ್ಕೂ ಅಧಿಕ ಉದ್ಯೋಗಿಗಳು ನಿರುದ್ಯೋಗಿಗಳಾಗಿದ್ದಾರೆ.

ಇನ್ನೂ ಭಾರತದಲ್ಲಿ  ತಯಾರಿಕಾ ಘಟಕ ಮುಂದುವರಿಸುವುದು ಲಾಭಕರವಾಗಿಲ್ಲ ಎಂದು ಫೋರ್ಡ್ ಹೇಳಿದ್ದು, ಮೇಕ್ ಇನ್ ಇಂಡಿಯಾ ಯೋಜನೆಯ ಬಗ್ಗೆ ವಿದೇಶಿ ಕಂಪೆನಿಗಳು ಯಾವ ರೀತಿಯಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದು ಕೂಡ ಇದೀಗ ಚರ್ಚಾ ವಿಚಾರವಾಗಿದೆ.

ಇನ್ನಷ್ಟು ಸುದ್ದಿಗಳು…

ಮೊದಲು ಕಾಂಗ್ರೆಸ್ ನ್ನು ತೊಡೆದು ಹಾಕಬೇಕು | ನಟ ಅಹಿಂಸಾ ಚೇತನ್

ಆ್ಯಂಕರ್ ಅನುಶ್ರೀ ವಿರುದ್ಧ ದಾಖಲೆ ರಹಿತ ಆರೋಪ | ಪ್ರಶಾಂತ್ ಸಂಬರ್ಗಿಯ ಬೆವರಳಿಸಿದ ಚಕ್ರವರ್ತಿ ಚಂದ್ರಚೂಡ್

ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಲಾರಿ: 6 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ

ಪೆಟ್ರೋಲ್ ತುಂಬುತ್ತಿದ್ದ ವೇಳೆ ಕಾರಿಗೆ ಬೆಂಕಿ: ಬಾಲಕಿ ಸಹಿತ 9 ಮಹಿಳೆಯರು ಸುಟ್ಟು ಕರಕಲು

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು, ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ: ವ್ಯಾಪಕ ಆಕ್ರೋಶ

ಪೊಲೀಸರ ಎದುರೇ ಬೆತ್ತಲಾಗಿ ಗಾಲ್ಫ್ ಕಾರ್ಟ್ ಓಡಿಸಿ ಶಾಕ್ ನೀಡಿದ ಯುವತಿ!

 

ಇತ್ತೀಚಿನ ಸುದ್ದಿ