ಭಾರೀ ಮಳೆಯ ಮುನ್ಸೂಚನೆ: ಹೀಗಿದೆ ನೋಡಿ ಹವಾಮಾನ ಇಲಾಖೆ ವರದಿ
ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲಾ ಭಾಗಗಳಲ್ಲಿ ಉತ್ತಮ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯಪ್ರದೇಶ, ರಾಜಸ್ತಾನ, ಗುಜರಾತ್ ಭಾಗಗಳಲ್ಲಿ ಉಂಟಾಗಿದ್ದ ತಿರುಗುವಿಕೆ ಶಿಥಿಲಗೊಂಡ ಕಾರಣ ಮುಂಗಾರು ಮತ್ತೆ ಉತ್ತಮ ಸ್ಥಿತಿಗೆ ತಲುಪಿದೆ.
ಕೊಡಗು ಭಾರಿ ಮಳೆಯ ಮುನ್ಸೂಚೆನೆ ಇದ್ದು, ಹಾಸನ, ಚಿಕ್ಕಮಗಳೂರು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಜುಲೈ 31 ಹಾಗೂ ಆಗಸ್ಟ್ 1ನೇ ತಾರೀಕಿನಂದು ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂಗಾರು ಚುರುಕಾಗಿರುವ ಕಾರಣ ಆಗಸ್ಟ್ 1ರ ತನಕ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕೊಡಗು ಭಾರಿ ಮಳೆಯ ಮುನ್ಸೂಚೆನೆ ಇದೆ. ಆಗಸ್ಟ್ 1ರ ನಂತರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: