ದೇವರು ಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಹತೋಟಿಗೆ ತಂದ ಅರಣ್ಯ ಇಲಾಖೆ

ಕೊಟ್ಟಿಗೆಹಾರ ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ದೇವರು ಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಪ್ರದೇಶಕ್ಕೆ ಪ್ರವಾಸಿಗರು ಹಾಗೂ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ಕಾಡ್ಗಿಚ್ಚಿನಿಂದ ಭಾರೀ ಹಾನಿ ಸಂಭವಿಸುವ ಸಾಧ್ಯತೆ ಇತ್ತು. ಪ್ರಥಮದೃಷ್ಟಿಯಲ್ಲಿಯೇ ಯಾರೋ ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದ ಹುಲ್ಲುಗಾವಲು, ಗಿಡಗಂಟಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ರಂಜಿತ್, ಗಸ್ತು ಅರಣ್ಯ ಪಾಲಕ ಅಭಿಜಿತ್, ಉಮೇಶ್ ಮತ್ತು ಅರಣ್ಯ ವೀಕ್ಷಕ ದಿನೇಶ್ ಅವರ ತಂಡ ದುರಂತವನ್ನು ತಡೆಯಲು ಹರಸಾಹಸ ಪಟ್ಟು ಬೆಂಕಿ ನಂದಿಸಿದರು. ಅವರು ತಕ್ಷಣವೇ ಸ್ಥಳಕ್ಕಾಗಮಿಸಿ ಸೂಕ್ತ ಕ್ರಮ ಕೈಗೊಂಡುದರಿಂದ ದೊಡ್ಡ ಪ್ರಮಾಣದ ಹಾನಿ ತಪ್ಪಿತು.
ಇಲ್ಲಿನ ಐತಿಹಾಸಿಕ ಸ್ಥಳದ ಸುರಕ್ಷತೆಗಾಗಿ ಹಾಗೂ ಇಂತಹ ಘಟನೆಗಳು ಪುನರಾವೃತಗೊಳ್ಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರದೇಶದಲ್ಲಿ ನಿಗಾ ದಳವನ್ನು ಬಿಗಿಗೊಳಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: