ಬೆಳ್ತಂಗಡಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಆತಂಕದಲ್ಲಿ ಸಾರ್ವಜನಿಕರು
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಣಿಯೂರು ಪೇಟೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಈ ಪ್ರದೇಶದಲ್ಲಿ ಕಳೆದ ಕೆಲವು ಸಮಯದಿಂದ ಒಂಟಿ ಸಲಗವೊಂದು ರಾತ್ರಿ ವೇಳೆ ಕೃಷಿ ನಾಶ ಮಾಡುತ್ತಿತ್ತು. ಇದೀಗ ಹಗಲು ಹೊತ್ತಿನಲ್ಲಿಯೇ ಪೇಟೆಬದಿಯಲ್ಲಿ ಕಾಡಾನೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ
ನದಿಯಲ್ಲಿ ಕಾಡಾನೆ ತಿರುಗಾಡುತ್ತಿದ್ದು ನದಿ ಬದಿಯ ತೋಟಗಳಿಗೆ ಹಾನಿಯುಂಟು ಮಾಡುತ್ತಿದೆ. ಆನೆ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿದು ನಾಗರಿಕರು ಆನೆಯನ್ನು ನೋಡಲು ಜಮಾಯಿಸಿದ್ದಾರೆ.
ನದಿಯಲ್ಲಿ ಕಾಡಾನೆ ತಿರುಗಾಡುತ್ತಿದ್ದರೆ, ಸಾರ್ವಜನಿಕರು ಸೇತುವೆಯ ಮೇಲೆ ನಿಂತು ಆನೆಯನ್ನು ನೋಡಲು ಮುಗಿ ಬಿದ್ದರು. ಜೊತೆಗೆ ಆತಂಕದ ಮಾತುಗಳು ಕೂಡ ಕೇಳಿ ಬಂದವು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka