ಮುಳ್ಳಯ್ಯನಗಿರಿ, ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು

17/02/2025
ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು ಸೃಷ್ಟಿಯಾಗಿದ್ದು, ಪಶ್ಚಿಮ ಘಟ್ಟಗಳ ತಪ್ಪಲಿನ 2 ಕಡೆ ಕಾಡ್ಗಿಚ್ಚು ಆವರಿಸಿದೆ.
ಬೆಂಕಿಯಿಂದ ಅಪರೂಪದ ಶೋಲಾರಣ್ಯ ನಾಶವಾಗ್ತಿದೆ. ಸಂಜೆಯ ನಂತರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.
ಕವಿಕಲ್ ಗಂಡಿ ಹಾಗೂ ಸೀತಾಳಯ್ಯನಗಿರಿ ಸಾಲಿನಲ್ಲಿ ಕಾಡ್ಗಿಚ್ಚು ಹೆಚ್ಚಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಪಶ್ಚಿಮ ಘಟ್ಟಗಳ ತಪ್ಪಲುಗಳಲ್ಲಿ ಈ ಕಾಡ್ಗಿಚ್ಚು ಸೃಷ್ಟಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: