ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಬಂಧನ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಅವರ ಗನ್ ಮ್ಯಾನ್ ನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದು, ಕಾನೂನು ಬಾಹಿರವಾಗಿ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ ಹಿನ್ನೆಲೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಲಾಯರ್ ಜಗದೀಶ್ ಗೆ ಸೇರಿದ ಕಾಂಪ್ಲೆಕ್ಸ್ ಬಳಿಕ ಅಣ್ಣಮ್ಮ ದೇವಿಯನ್ನು ಕೂರಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಜಗದೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೇ ವಿಚಾರದಲ್ಲಿ ಜನವರಿ 24ರಂದು ರಾತ್ರಿ ಜಗದೀಶ್ ಕಾರಿನ ಮೇಲೆ ದೊಣ್ಣೆಯಿಂದ ಹೊಡೆದು ಕಾರಿಗೆ ಕಾರಿಗೆ ಹಾನಿ ಮಾಡಲಾಗಿತ್ತಲ್ಲದೇ ಜಗದೀಶ್ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಈ ವೇಳೆ ಜಗದೀಶ್ ಅವರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿ ಗುಂಪು ಚದುರಿಸಿದ್ದರು ಎನ್ನಲಾಗಿದೆ.
ಗಾಳಿಯಲ್ಲಿ ಗುಂಡು ಹಾರಿಸಿದ ಸಂಬಂಧ ತೇಜಸ್ ಎಂಬವರು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಉತ್ತರ ಪ್ರದೇಶದಲ್ಲಿ ಮಾತ್ರವೇ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಆರೋಪದ ಹಿನ್ನೆಲೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದೆಡೆ ದೂರುದಾರನ ಮೇಲೆ ಹಲ್ಲೆ ನಡೆಸಿದ ಆರೋಪವೂ ಕೇಳಿ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7