ಮಾಜಿ ಉಪಸಭಾಪತಿ ಮನೋಹರ್ ತಹಶೀಲ್ದಾರ್ ನಿಧನ
ಬೆಂಗಳೂರು: ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಮನೋಹರ್ ತಹಶೀಲ್ದಾರ್ ನಿಧನರಾಗಿದ್ದು, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ, ಕಾರ್ಯಕರ್ತರು, ಅಭಿಮಾನಿಗಳನ್ನು ಅಗಲಿದ್ದಾರೆ.
78 ವರ್ಷ ವಯಸ್ಸಿನ ಮನೋಹರ್ ತಹಶೀಲ್ದಾರ್ ಅವರು, ಅನಾರೋಗ್ಯದಿಂದ ಬಳಲುತ್ತಿದ್ದು, ನಗರದ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಮೊದಲ ಬಾರಿಗೆ 1978ರಲ್ಲಿ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಚುನಾಯಿತರಾಗಿದ್ದ ಮನೋಹರ್ ತಹಶೀಲ್ದಾರ್ ಅವರು, 1989, 1999, 2013 ಸೇರಿದಂತೆ 4 ಬಾರಿ ವಿಧಾನಸಭೆ ಪ್ರವೇಶ ಮಾಡಿದ್ದರು. ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿಧಾನಸಭೆ ಉಪಾಧ್ಯಕ್ಷರಾಗಿ ಮನೋಹರ್ ತಹಶೀಲ್ದಾರ್ ಸೇವೆ ಸಲ್ಲಿಸಿದ್ದರು.
2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: