ಕುಂಭಮೇಳ: ಮಾಜಿ ಐಎಎಸ್ ಅಧಿಕಾರಿ ಈಗ ಸನ್ಯಾಸಿ
ಉತ್ತರಪ್ರದೇಶ: ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಐ.ಆರ್.ಪೆರುಮಾಳ್ ಕುಂಭಮೇಳದಲ್ಲಿ ಗಮನ ಸೆಳೆದಿದ್ದು, ಸ್ವಾಮೀಜಿಯಾಗಿ ಪ್ರತ್ಯಕ್ಷವಾಗಿದ್ದಾರೆ.
ತಮಿಳುನಾಡು ಮೂಲದ ಪೆರುಮಾಳ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. 1993—94ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. 2012ರಲ್ಲಿ ನಿವೃತ್ತಿ ಪಡೆದ ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಕೆಜೆಪಿ ಪಕ್ಷ ಸೇರ್ಪಡೆಗೊಂಡಿದ್ದ ಅವರು, 2013ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಶಿವಾಜಿ ನಗರದಿಂದ ಸ್ಪರ್ಧಿಸಿದ್ದರು. ಆದರೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು.
2014ರಲ್ಲಿ ಸನ್ಯಾಸತ್ವ ಸ್ವೀಕರಿಸಿದ ಅವರು, ಶಿವಯೋಗಿ ಪೆರುಮಾಳ್ ಸ್ವಾಮೀಜಿ ಎಂದು ನಾಮಕರಣ ಮಾಡಿಕೊಂಡಿದ್ದರು. ಬಾಲ್ಯದಿಂದಲೂ ಇವರು ಶಿವ, ಪಾರ್ವತಿಯ ಭಕ್ತರಾಗಿದ್ದರಂತೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7