ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಹೃದಯಾಘಾತ: ಮಾಜಿ ಶಾಸಕ ಶ್ರೀಶೈಲಪ್ಪ ಇನ್ನಿಲ್ಲ
ಬೆಂಗಳೂರು: ಬೀದರ್ ನ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಖಾಸಗಿ ರೆಸಾರ್ಟ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುತ್ತಿದ್ದ ವೇಳೆ ಶ್ರೀಶೈಲಪ್ಪ ಅವರಿಗೆ ಹೃದಯಾಘಾತವಾಗಿದ್ದು, ಕುಸಿದು ಬಿದ್ದು ವಾಂತಿ ಮಾಡಿಕೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು, ಮೃತಪಟ್ಟಿದ್ದಾರೆ.
ಶ್ರೀಶೈಲಪ್ಪ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಭೆಯನ್ನು ರದ್ದು ಪಡಿಸಿ ಅದೇ ಸಭೆಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka