ಮಾಜಿ ಶಾಸಕ ಯು.ಆರ್. ಸಭಾಪತಿ ಇನ್ನಿಲ್ಲ
ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್.ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಗರದ ಬಡಗುಪೇಟೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ಬಳಿಕ ಕರ್ನಾಟಕ ಕಾಂಗ್ರೆಸ್ ಪಕ್ಷವು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾಯಿತು.
1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಎರಡನೇ ಬಾರಿ ಇವರು ಶಾಸಕರಾಗಿ ಆಯ್ಕೆಯಾದರು. 2004ರ ಚುನಾವಣೆಯಲ್ಲಿ ಇವರು ರಘುಪತಿ ಭಟ್ ವಿರುದ್ಧ ಪರಾಜಯಗೊಂಡರು.ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw