ಖ್ಯಾತ ಕ್ರಿಕೆಟಿಗನ ಆರೋಗ್ಯ ಸ್ಥಿತಿ ಗಂಭೀರ | ಜೀವ ರಕ್ಷಕ ಸಾಧನ ಅಳವಡಿಕೆ
ಮೆಲ್ಬರ್ನ್: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಕ್ರಿಸ್ ಕೇನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯುನಲ್ಲಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಹೃದ್ರೋಗ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಸದ್ಯ ಕ್ರಿಸ್ ಕೇನ್ಸ್ ಅವರಿಗೆ ಜೀವ ರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಹೃದ್ರೋಗದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏರಾಟಿಕ್ ಡಿಸೆಕ್ಷನ್ ಎಂಬ ಗಂಭೀರ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ.
ಕ್ಯಾನ್ ಬೆರಾದಲ್ಲಿ ಕಳೆದ ವಾರ ಕ್ರಿಸ್ ಕೇನ್ಸ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಸಿಡ್ನಿಯ ಸೇಂಟ್ ವಿನ್ಸೆಂಟ್ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಜೀವ ರಕ್ಷಕ ಸಾಧನಗಳ ಬಲದಲ್ಲಿ ಇದೀಗ ಅವರು ಉಸಿರಾಡುತ್ತಿದ್ದು, ವೈದ್ಯರ ತಂಡ ನಿರಂತರವಾಗಿ ಚಿಕಿತ್ಸೆ ನೀಡುತ್ತಲೇ ಇದ್ದಾರೆ ಎಂದು ತಿಳಿದು ಬಂದಿದೆ.
ಇನ್ನಷ್ಟು ಸುದ್ದಿಗಳು…
ಪ್ರೇಮ ನಿವೇದನೆ ತಿರಸ್ಕರಿಸಿದ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದರೆ ಹುಷಾರ್: ಕೇರಳ ಸಿಎಂ ಪಿಣರಾಯಿ ವಿಜಯನ್ ಎಚ್ಚರಿಕೆ
ದಿಢೀರ್ ಬೆಳವಣಿಗೆ: ರಾಜೀನಾಮೆಗೆ ಮುಂದಾದ ಸಚಿವ ಆನಂದ್ ಸಿಂಗ್?
ನೀರಜ್ ಚೋಪ್ರಾರನ್ನು ಅನುಕರಿಸಿ ರೋಡಲ್ಲಿ ನಿಂತು ಈಟಿ ಎಸೆದ ರಾಖಿ ಸಾವಂತ್ | ಮುಂದೇನಾಯ್ತು?
“ಲವ್ ಯೂ ರಚ್ಚು” ಚಿತ್ರದ ಶೂಟಿಂಗ್ ವೇಳೆ ಅವಘಡ | ಓರ್ವ ಸಾವು, ಇನ್ನೋರ್ವನಿಗೆ ಗಾಯ | ನಟ ಅಜಯ್ ರಾವ್ ಆಕ್ರೋಶ