ಹರ್ಯಾಣ ವಿಧಾನಸಭಾ ಚುನಾವಣೆ: ಗೆಲುವಿನ ನಗೆ ಬೀರಿದ ಮಾಜಿ ಕುಸ್ತಿಪಟು ವಿನೀಶ್ ಪೊಗಟ್
08/10/2024
ಹರ್ಯಾಣ: ಹರ್ಯಾಣದ ಜಿಂದ್ ಜಿಲ್ಲೆಯ ಜುಲಾನ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭಾರತೀಯ ಮಾಜಿ ಕುಸ್ತಿಪಟು ವಿನೀಶ್ ಪೊಗಟ್ ಗೆಲುವಿನ ನಗೆ ಬೀರಿದ್ದಾರೆ.
ತೀರಾ ಹಣಾಹಣಿಯಿಂದ ಕೂಡಿದ್ದ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೀಶ್ ಪೊಗಟ್ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರನ್ನು 6 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.
ಪ್ರಾರಂಭದ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದ ವಿನೀಶ್ ಪೊಗಟ್ ಅವರು 10ನೇ ಸುತ್ತಿನ ನಂತರ ಮುನ್ನಡೆ ಸಾ„ಸಿ ಅಂತಿಮ ಸುತ್ತಿನಲ್ಲಿ ಗೆಲುವು ಸಾಧಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: