ನೂತನ ಕೃಷಿ ಮಸೂದೆ ವಿರೋಧಿಸಿ, ರೈತರ ಪ್ರತಿಭಟನೆಗೆ ಬೆಂಬಲಿಸಿದ “ದಿ ಗ್ರೇಟ್ ಖಲಿ” - Mahanayaka
1:19 AM Wednesday 11 - December 2024

ನೂತನ ಕೃಷಿ ಮಸೂದೆ ವಿರೋಧಿಸಿ, ರೈತರ ಪ್ರತಿಭಟನೆಗೆ ಬೆಂಬಲಿಸಿದ “ದಿ ಗ್ರೇಟ್ ಖಲಿ”

02/12/2020

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಟೆಕ್ರಿ ಗಡಿಯಲ್ಲಿ ರೈತರ ಚಳವಳಿ ನಡೆಯುತ್ತಿದ್ದು, ಮಾಜಿ ಡಬ್ಲ್ಯುಡಬ್ಲ್ಯುಇ ಚಾಂಪಿಯನ್ “ದಿ ಗ್ರೇಟ್ ಖಲಿ” ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ತಾವು ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ ಚಿತ್ರವನ್ನು ಇನ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. “ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಈ ಪ್ರತಿಭಟನೆಯನ್ನು ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.


ಟೆಕ್ರಿ ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹೊಸ ಕೃಷಿ ಕಾನೂನಿನಿಂದ ರೈತರು ಎದುರಿಸಬೇಕಾದ ಸಂಕಷ್ಟಗಳ ಬಗ್ಗೆ ವಿವರಿಸಿದರು. ಅಲ್ಲದೇ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕಾದರೆ ಎಲ್ಲರೂ ರೈತರ ಪರವಾಗಿ ನಿಲ್ಲಬೇಕಿದೆ ಎಂದು ಅವರು ಮನವಿ ಮಾಡಿದರು.

ಇತ್ತೀಚಿನ ಸುದ್ದಿ