67 ಲಕ್ಷ ರೂಪಾಯಿ ಹೂಡಿಕೆ ಮಾಡಿಸಿ ವಂಚಿಸಿದ ಕೇರಳ ಮೂಲದ ವ್ಯಕ್ತಿ!
ಬಹರೈನ್ ನ ಸಂಸ್ಥೆಯೊಂದರಲ್ಲಿ 67 ಲಕ್ಷ ರೂಪಾಯಿ ಹೂಡಿಕೆ ಮಾಡಿಸಿದ ಬಳಿಕ ವಂಚಿಸಿರುವ ಬಗ್ಗೆ ಮಂಗಳೂರು ನಗರದ ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು ಬಹರೈನ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಅಲ್ಲಿ ಪರಿಚಯವಾದ ಕೇರಳದ ಕೆ.ಪಿ.ಹರಿಕುಮಾರ್ ಎಂಬುವವರು ತಾನು ನಡೆಸುತ್ತಿರುವ ಉದ್ಯಮದ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡುವಂತೆ ಸೂಚಿಸಿದ್ದರು ಎನ್ನಲಾಗಿದೆ.
ಅದರಂತೆ ದೂರುದಾರರು 67 ಲಕ್ಷ ರೂಪಾಯಿಯನ್ನು ಆ ಸಂಸ್ಥೆಯಲ್ಲಿ ಹೂಡಿಕೆ ಮಾಡಿ ಕರಾರು ಪತ್ರಗಳನ್ನು ಕೂಡ ತಯಾರಿಸಿದ್ದರು. ಬಳಿಕ ಹರಿಕುಮಾರ್ ಹಣ ವಾಪಸ್ ನೀಡದೆ ವಂಚಿಸಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka