ಶಾಲಾ ಗಂಡು ಮಕ್ಕಳಿಗೂ ಕೂಡ ಉಚಿತ ಬಸ್ ಪ್ರಯಾಣ : ಇದರ ಲಾಭ ಪಡೆಯುವುದು ಹೇಗೆ?

ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಅವಕಾಶವಿದೆ. ಅದೇ ರೀತಿ ಇದೀಗ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪ್ರಯಾಣಕ್ಕೆ ಅವಕಾಶವಿದ್ದು ಇದರ ಮಾಹಿತಿಯು ಇಲ್ಲಿದೆ..
ಕರ್ನಾಟಕ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಹಾಗೂ 10ನೇ ತರಗತಿಯ ವಾರ್ಷಿಕ ಪರೀಕ್ಷೆಗಳು ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಇದರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಸುಲಭವಾಗಿ ಎಂಬ ಕಾರಣದಿಂದಾಗಿ ಈ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಈ ಸೌಲಭ್ಯ ಬಳಸಿಕೊಳ್ಳುವುದು ಹೇಗೆ?
ದ್ವಿತೀಯ ಪಿಯುಸಿ ಹಾಗೂ 10ನೇ ತರಗತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಮನೆಯಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿದರೆ ಸಾಕು.
* SSLC ಪರೀಕ್ಷೆ — ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ
* 2nd PUC ಪರೀಕ್ಷೆ — ಮಾರ್ಚ್ 1 ರಿಂದ 20ರ ವರೆಗೆ
ಯಾವ ಯಾವ ಬಸ್ ಗಳಲ್ಲಿ ಓಡಾಡಬಹುದು?
ವಾರ್ಷಿಕ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: