ಜೆ ಡಿ ಎಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ವಿತರಿಸಲಾಗುವುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಚೇನಹಳ್ಳಿಯಲ್ಲಿ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಸರ್ಕಾರದ ವತಿಯಿಂದ ಕೊಡಲಾಗುವುದು ಎಂದು ಹೇಳಿದ್ದಾರೆ.
ಎರಡು ಪಕ್ಷಗಳ ವಿರುದ್ಧ ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದೇನೆ. ಪಂಚರತ್ನ ಕಾರ್ಯಕ್ರಮಗಳನ್ನು ನಾನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EOUjVqy3Mmp66N4bRSBoht
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw