ಡೀಮ್ಡ್ ಫಾರೆಸ್ಟ್‌ನಿಂದ ಮುಕ್ತ: ಸಿಎಂ ಹೇಳಿಕೆ ಕೇವಲ ರಾಜಕೀಯ— ಮಾಜಿ ಸಚಿವ ರಮಾನಾಥ ರೈ - Mahanayaka
9:57 PM Thursday 12 - December 2024

ಡೀಮ್ಡ್ ಫಾರೆಸ್ಟ್‌ನಿಂದ ಮುಕ್ತ: ಸಿಎಂ ಹೇಳಿಕೆ ಕೇವಲ ರಾಜಕೀಯ— ಮಾಜಿ ಸಚಿವ ರಮಾನಾಥ ರೈ

ramanath rai
12/12/2022

ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷದಲ್ಲಿ ವಿವಿಧ ಕ್ಷೇತ್ರಗಳಿಗೆ ಸಾಕಷ್ಟು ಆಕಾಂಕ್ಷಿಗಳಿಂದ ಟಿಕೆಟ್‌ ಗಾಗಿ ಅರ್ಜಿಗಳು ಬಂದಿವೆ ಎಂದ ಮೇಲೆ ಪಕ್ಷದ ಮೇಲೆ ನಂಬಿಕೆ ಇದೆ. ಪಕ್ಷ ಜಯಗಳಿಸಲಿದೆ ಎಂಬ ಹಿನ್ನೆಲೆಯಲ್ಲಿ ಇಷ್ಟೊಂದು ಅರ್ಜಿಗಳು ಬಂದಿವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು ಆರು ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಫಾರೆಸ್ಟ್‌ನಿಂದ ಮುಕ್ತಗೊಳಿಸುವುದಾಗಿ ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರು ನೀಡಿರುವ ಹೇಳಿಕೆಗಳು ಕೇವಲ ರಾಜಕೀಯ ಮಾತ್ರ. ಆ ಬಗ್ಗೆ ಸುಪ್ರೀಂ ಕೋರ್ಟ್‌ನಿಂದ ಆದೇಶವಾಗಬೇಕಾಗಿದೆ ಎಂದರು.

ಪ್ರಾಕೃತಿಕ ಸಮತೋಲನವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಡೀಮ್ಡ್ ಫಾರೆಸ್ಟ್ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ರಾಜ್ಯ ಸರಕಾರ ಕಂದಾಯ ಇಲಾಖೆಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವರದಿ ತಯಾರಿಸಲಾಗಿತ್ತು. ಸುಮಾರು 10 ಲಕ್ಷ ಹೆಕ್ಟೇರ್‌ನಲ್ಲಿ ಸುಮಾರು 6 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಫಾರೆಸ್ಟ್‌ನಿಂದ ಕೈಬಿಡೇಕೆಂದು ವರದಿ ನೀಡಲಾಗಿತ್ತು. ಆದರೆ ಸರ್ವೆ ನಂಬರ್ ವಿಭಾಗವನ್ನು ಸರಿಯಾಗಿ ಗುರುತಿಸಿಲ್ಲ ಎಂದು ಅದನ್ನು ತಿರಸ್ಕರಿಸಲಾಗಿತ್ತು.

ಈ ಬಗ್ಗೆ ಅರಣ್ಯ ಸಚಿವನಾಗಿದ್ದ ವೇಳೆ ಈ ವಿಷಯ ಕೈಗೆತ್ತಿಕೊಂಡು ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಲು ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ