ಉಚಿತ ಐಎಎಸ್, ಕೆಎಎಸ್ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ - Mahanayaka
11:30 AM Saturday 7 - September 2024

ಉಚಿತ ಐಎಎಸ್, ಕೆಎಎಸ್ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ias
25/07/2024

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವಂತಹ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು (Pre– Exam Training) ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ (UPSC) ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು? ಅರ್ಜಿ ಹೇಗೆ ಸಲ್ಲಿಸಬೇಕು? ಈ ಮಾಹಿತಿಯನ್ನು ತಿಳಿದುಕೊಂಡು ಅರ್ಹರಿದ್ದರೆ ಈಗಲೇ ಅರ್ಜಿ ಸಲ್ಲಿಸಿ..

ಉಚಿತ ಐಎಎಸ್, ಕೆಎಎಸ್ ಪರೀಕ್ಷೆ ತರಬೇತಿ ಯೋಜನೆಯ ಮಾಹಿತಿ:


Provided by

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ನಿರ್ದೇಶನಾಲಯದ ವತಿಯಿಂದ 2024 25 ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ 10 ತಿಂಗಳ ಅವಧಿಗೆ ಉಚಿತ ವಸತಿ ಸಹಿತ ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಇದರಿಂದ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಯಾರಿ ನಡೆಸಲು ಆರ್ಥಿಕ ಸಮಸ್ಯೆಯಿಂದ ದೂರು ಮಾಡಲು ಈ ಯೋಜನೆ ಸಹಾಯಕವಾಗಿದೆ. ಇದರಿಂದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಸರ್ಕಾರಿ ನೌಕರಿ ಪಡೆಯಲು ಅನುಕೂಲವಾಗಲಿದೆ.

ಉಚಿತ IAS KAS ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು:

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಾಗೀರಬೇಕು ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು.

* ಅರ್ಜಿ ಸಲ್ಲಿಸುವವರು ಕನಿಷ್ಠ 21 ವರ್ಷದಿಂದ ಗರಿಷ್ಠ 35 ವರ್ಷದ ವಯೋಮಿತಿಯಲ್ಲಿರಬೇಕು.

Important Dates to Apply for Free IAS KAS Coaching :

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 24 ಜುಲೈ 2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಆಗಸ್ಟ್ 2024

ಅರ್ಜಿ ಸಲ್ಲಿಸುವ ವಿಧಾನ :

ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಸಲ್ಲಿಸುವವರು ಮೊದಲು ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡ ನಂತರ ನೀವು ಅರ್ಹರಿದ್ದಲ್ಲಿ, ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಲಿಂಕ್ : https://sevasindhuservices.karnataka.gov.in/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ