ಟ್ಯಾಂಕರ್ ನೀರು ಪೂರೈಕೆಗೆ ಕ್ರಮವಹಿಸಲು ಜಿ.ಪಂ. ಸಿಇಒ ಜೊತೆ ಶಾಸಕ ಯಶ್ ಪಾಲ್ ಸುವರ್ಣ ಚರ್ಚೆ
ಉಡುಪಿ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾಮ ಪಂಚಾಯತ್ ಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಸನ್ನ ಎಚ್ ರವರಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ ಚರ್ಚಿಸಿದರು.
ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆದ್ಯತೆಯ ಮೇರೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ತಕ್ಷಣದಿಂದಲೇ ಕಾರ್ಯ ಪ್ರವೃತ್ತರಾಗುವಂತೆ ನಿರ್ದೇಶನ ನೀಡುವಂತೆ ಹೇಳಿದರು.
ಈ ಬಗ್ಗೆ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಕೂಡಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿ ಕುಡಿಯುವ ನೀರಿನ ಪೂರೈಕೆಗೆ ವ್ಯವಸ್ಥೆ ಮಾಡುವಂತೆಯೂ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw