ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ | ಸಾಕು ಬಾರಕ್ಕೋ… ಎಂದ ಕಾರ್ಯಕರ್ತರು! - Mahanayaka
8:14 PM Wednesday 11 - December 2024

ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ | ಸಾಕು ಬಾರಕ್ಕೋ… ಎಂದ ಕಾರ್ಯಕರ್ತರು!

shobha karandlaje
16/08/2021

ಮಂಡ್ಯ: ಬಿಜೆಪಿಯ ಜನಾಶೀರ್ವಾದ ಯಾತ್ರೆಯ ಭಾಗವಾಗಿ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಂಡ್ಯಕ್ಕೆ ಭೇಟಿ ನೀಡಿದ್ದು, ಮಂಡ್ಯದ ಗ್ರಾಮವೊಂದರ ಗದ್ದೆಗಿಳಿದು ಗ್ರಾಮಸ್ಥರ ಜೊತೆಗೆ ನಾಟಿ ಮಾಡಿದರು. ಈ ವೇಳೆ ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಶೋಭಾ ಕರಂದ್ಲಾಜೆ ಅವರನ್ನು ಹುರಿದುಂಬಿಸಿದರು.

ಮಂಡ್ಯ ತಾಲೂಕಿನ ಹೊನಗನಹಳ್ಳಿ ಗ್ರಾಮದ ಭತ್ತದ ಗದ್ದೆಗೆ ಇಳಿದ ಸಚಿವೆ ಶೋಭಾ ಕರಂದ್ಲಾಜೆ, ರೈತರೊಂದಿಗೆ ನಾಟಿ ಮಾಡಿದರು. ನಾಟಿ ಮಾಡುವುದರಲ್ಲಿ ತಲ್ಲೀನರಾಗಿದ್ದ ಶೋಭಾ ಕರಂದ್ಲಾಜೆ ಅವರನ್ನು ಗದ್ದೆಯ ಅಂಚಿನಲ್ಲಿ ನಿಂತಿದ್ದ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು, ಅಕ್ಕೋ… ನಾಟಿ ಹಾಕಕ್ಕೋ ಹಾಕು ಎನ್ನುತ್ತಾ ಹುರಿದುಂದಬಿಸಿದರು. ಬಳಿಕ ಬಾರಕ್ಕೋ, ಸಾಕಕ್ಕೋ… ಸಾಕು ಬನ್ನಿ ಕಾರ್ಯಕ್ರಮಕ್ಕೆ ಎನ್ನುತ್ತಾ ಚಪ್ಪಾಳೆ ತಟ್ಟಿದರು.

ಗದ್ದೆ ನಾಟಿ ಮಾಡಿದ ಬಳಿಕ ಕಾರ್ಯಕರ್ತರ ಜೊತೆಗೆ ವೇದಿಕೆ ಕಾರ್ಯಕ್ರಮಕ್ಕೆ ಶೋಭಾ ಕರಂದ್ಲಾಜೆ ತೆರಳಿದರು. ಈ ವೇಳೆ ಗದ್ದೆ ನಾಟಿಯ ಬಗ್ಗೆ ಕಾರ್ಯಕರ್ತರು ಮಾತನಾಡಿದ್ದು, ಏಯ್ ನನ್ಗೆ ನಾಟಿ ಮಾಡೋಕೆ ಬರುತ್ತೆ ಎನ್ನುತ್ತಾ, ಕಾರ್ಯಕರ್ತರ ಜೊತೆಗೆ ನಗುತ್ತಾ ತೆರಳಿದರು.

ಇನ್ನೂ ವೇದಿಕೆ ಕಾರ್ಯಕ್ರಮದ ವೇಳೆ ಬಿಜೆಪಿ ಮುಖಂಡ ಚಂದಗಾಲು ಶಿವಣ್ಣ ಅವರನ್ನು ಕಾರ್ಯಕ್ರಮಕ್ಕೆ ಕರೆಯಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಶೋಭಾ ಕರಂದ್ಲಾಜೆ ಅವರ ಸಮ್ಮುಖದಲ್ಲಿಯೇ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದರು.

ಇನ್ನಷ್ಟು ಸುದ್ದಿಗಳು…

ಗಲಭೆ ಸೃಷ್ಟಿಸಲು ಮುಂದಾದರೆ, ಸಂವಿಧಾನ ಬದ್ಧವಾಗಿ ತಡೆಯಲು ಸಿದ್ಧ | ಸಂಘಪರಿವಾರಕ್ಕೆ ಪಿಎಫ್ ಐ ತಿರುಗೇಟು

ವೀರ ಸಾರ್ವರ್ಕರ್ ರಥಯಾತ್ರೆ ನಡೆಸುತ್ತೇವೆ ತಾಕತ್ ಇದ್ದರೆ ತಡೆಯಿರಿ | ಎಸ್ ಡಿಪಿಐಗೆ ಹಿಂದುತ್ವ ಸಂಘಟನೆಗಳ ಸವಾಲು

ಧ್ವಜಾರೋಹಣದ ವೇಳೆ ರಾಷ್ಟ್ರಗೀತೆ ಮರೆತ ಸಂಸದ, ಕೊನೆಗೆ ಮಾಡಿದ್ದೇನು? | ವಿಡಿಯೋ ವೈರಲ್

ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದೊಳಗೆ ಮೊಬೈಲ್ ಬಳಕೆ ನಿಷೇಧ | ಕಾರಣ ಏನು ಗೊತ್ತಾ?

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶಕ್ಕೆ | ಕಾಬುಲ್ ಗೆ ಪ್ರವೇಶಿಸಿ ವಶಕ್ಕೆ ಪಡೆದುಕೊಂಡ ಉಗ್ರರು

ಇತ್ತೀಚಿನ ಸುದ್ದಿ