ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಬಂದಿತ್ತು ಪ್ರವಾಹ | ನೀರಲ್ಲಿ ಕೊಚ್ಚಿ ಹೋದ ಯುವಕ ಬದುಕಿದ್ದು ಹೇಗೆ? - Mahanayaka
4:22 PM Friday 20 - September 2024

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಬಂದಿತ್ತು ಪ್ರವಾಹ | ನೀರಲ್ಲಿ ಕೊಚ್ಚಿ ಹೋದ ಯುವಕ ಬದುಕಿದ್ದು ಹೇಗೆ?

belagavi
23/07/2021

ಬೆಳಗಾವಿ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು, ನೀರಿನಲ್ಲಿ ಈಜುತ್ತಾ ಪಾರಾಗಲು ಪ್ರಯತ್ನಿಸುತ್ತಿದ್ದ ಯುವಕನನ್ನು  ಗ್ರಾಮಸ್ಥರು ರಕ್ಷಿಸಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಏಕಾಏಕಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಳವಾದ ಪರಿಣಾಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹಳ್ಳದ ನೀರಿಗೆ ಸಿಲುಕಿದ್ದಾನೆ. ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಯುವಕ ಈಜಿದ್ದಾನೆ. ಈ ವೇಳೆ ಗ್ರಾಮಸ್ಥರು ಆತನಿಗೆ ನೆರವಾಗಿದ್ದರಿಂದ ಯುವಕನ ಪ್ರಾಣ ಉಳಿದಿದೆ.

ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದುರ್ಗಾಡಿ ಬೆಟ್ಟ ಪ್ರದೇಶದಿಂದ ಮಳೆ ನೀರು ನುಗ್ಗಿ ಬರುತ್ತಿದೆ. ಇದರಿಂದಾಗಿ ನಂದಗಡ ಡ್ಯಾಮ್ ಗೆ ಅಪಾರ ಪ್ರಮಾಣದ ನೀರು ಬರುತ್ತಿದ್ದು, ಗ್ರಾಮದ ಹೊರವಲಯಗಳಲ್ಲಿ ಕೃಷಿ ಜಮೀನುಗಳು ಜಲಾವೃತವಾಗಿದ್ದು, ಖಾನಾಪುರ ತಾಲೂಕಿನಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ.


Provided by

ಇನ್ನಷ್ಟು ಸುದ್ದಿಗಳು…

ಬಿಜೆಪಿಗೆ ರಾಜೀನಾಮೆ ಪರ್ವ ಆರಂಭವಾಗುತ್ತಾ? | 2ನೇ ಅಸ್ತ್ರ ಪ್ರಯೋಗಕ್ಕೆ ಸಜ್ಜು!

ವಿಡಿಯೋದಲ್ಲಿ ಬೆತ್ತಲಾಗಲು ರಾಜ್ ಕುಂದ್ರಾ  ಹೇಳಿದ್ದರು ಎಂದ ಯೂಟ್ಯೂಬ್ ಸ್ಟಾರ್ | ಶಿಲ್ಪಾ ಶೆಟ್ಟಿ ಪತಿಯ ಮತ್ತೊಂದು ಕರ್ಮಕಾಂಡ ಬಯಲು

ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನ

ಖ್ಯಾತ ಪೋರ್ನ್ ಸ್ಟಾರ್ ಳ ಮೃತದೇಹ ಕಾರಿನಲ್ಲಿ ಪತ್ತೆ | ಆತ್ಮಹತ್ಯೆಯೋ?  ಕೊಲೆಯೋ?

ಪತ್ನಿ ಬಿಟ್ಟು ಹೋಗಿದಕ್ಕೆ ನೊಂದು ದೇವಸ್ಥಾನದಲ್ಲೇ ನೇಣಿಗೆ ಶರಣಾದ ಅರ್ಚಕ!

ಇತ್ತೀಚಿನ ಸುದ್ದಿ