ಹರ್ಷ ಸಾವಿನ ಬಳಿಕದ ಗಲಭೆಗೆ ಈಶ್ವರಪ್ಪನೇ ಕಾರಣ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
ಮಂಗಳೂರು: ಹರ್ಷ ಸಾವಿಗೂ ಹಿಜಾಬ್‌ಗೂ ಸಂಬಂಧವಿಲ್ಲ. ಹರ್ಷ ಸಾವಿನ ಬಳಿಕ ನಡೆದ ಗಲಭೆಗೆ ಈಶ್ವರಪ್ಪನೇ ಕಾರಣ. ಅವರು 144 ಸೆಕ್ಷನ್‌ನ್ನು ಉಲ್ಲಂಘಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹರ್ಷ ಮನೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಹೋಗಿಲ್ಲ ಅನ್ನೋದು ನಿಜ. ಆದರೆ ಅದು ವೈಯಕ್ತಿಕ ದ್ವೇಷದಿಂದ ನಡೆದಿರುವ ಕೊಲೆ. ಅದಕ್ಕೆ ರಾಜಕೀಯ ಬಣ್ಣ ಕಟ್ಟಲಾಗಿದೆ ಎಂದರು.
ಈ ಹಿಂದೆ ಧರ್ಮಸ್ಥಳದಲ್ಲಿ ನಮ್ಮ ಕಾಂಗ್ರೆಸ್ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ. ಯಾರೇ ಕೊಲೆ ಮಾಡಿದರೂ ಅದನ್ನು ನಾನು ಖಂಡಿಸುತ್ತೇನೆ. ಶಿವಮೊಗ್ಗ, ಬೆಳ್ತಂಗಡಿ ಎರಡು ಹತ್ಯೆಯನ್ನು ಖಂಡಿಸುತ್ತೇನೆ. ಜೀವ ಅಮೂಲ್ಯವಾದದು, ಕೊಲೆ ಮಾಡುವ ಮಟ್ಟಕ್ಕೆ ಹೋಗಬಾರದು ಎಂದು ಹೇಳಿದರು.
ಎಸ್‌ಡಿಪಿಐ, ಪಿಎಫ್ ಐ ಸಂಘಟನೆ ಬ್ಯಾನ್ ವಿಚಾರವಾಗಿ ಮಾತನಾಡಿದ ಅವರು, ಈ ಸಂಘಟನೆಯನ್ನು ಬ್ಯಾನ್ ಮಾಡೋದಾದರೆ ಮಾಡಿ. ಯಾರು ಬೇಡ ಅಂತಾರೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ನಿಮ್ಮ ಕೈಯಲ್ಲಿ ಇದೆ. ನಾವು ಬ್ಯಾನ್ ಮಾಡೋದು ಬೇಡ ಎಂದು ಹೇಳಿದ್ದೇವಾ? ಎಂದು ಪ್ರಶ್ನಿಸಿದರು.
ಇನ್ನು 50-60 ವರ್ಷಗಳವರೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರಲಿದೆ. ಇಂದಿಗೂ ಬೆಂಗಳೂರಿನಲ್ಲಿ ಶೇ. 20 ನಾಗರಿಕರಿಗೆ ಕಾವೇರಿ ನೀರು ಸಿಗುತ್ತಿಲ್ಲ. ಆದ್ದರಿಂದ ‘ನಮ್ಮ ನೀರು ನಮ್ಮ ಹಕ್ಕು’ ಘೋಷ ವಾಕ್ಯದಡಿ ಮೇಕೆದಾಟು ಪಾದಯಾತ್ರೆ ಮಾಡಲಿದ್ದೇವೆ ಎಂದರು.
ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಸಿಲುಕಿರುವ ವಿಚಾರರ ಕುರಿತು ಮಾತನಾಡಿದ ಅವರು, ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿರೋದು 10-15 ದಿನಗಳ ಹಿಂದೆಯೇ ತಿಳಿದಿತ್ತು. ಭಾರತದ, ಕರ್ನಾಟಕದ ವಿದ್ಯಾರ್ಥಿಗಳು ಅಲ್ಲಿದ್ದಾರೆ ಎಂಬುದು ಗೊತ್ತಿತ್ತು. ಆ ವಿದ್ಯಾರ್ಥಿಗಳನ್ನು ಮರಳಿ ಭಾರತಕ್ಕೆ ಕರೆ ತರಲು ಕೇಂದ್ರ ಸರಕಾರವಾಗಲೀ, ರಾಜ್ಯ ಸರಕಾರವಾಗಲೀ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಸರಕಾರ ಇಂತಹ ವಿಚಾರಗಳಲ್ಲಿ ಈ ರೀತಿ ಮೈಮರೆಯಬಾರದು. ಇಂತಹ ವಿಷಯಗಳಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದೇಶದ ರಕ್ಷಣೆಗೆ ಬಂದೂಕು ಹಿಡಿದ ಉಕ್ರೇನ್ ಅಧ್ಯಕ್ಷ
ಕಾರು-ಬುಲೆಟ್ ಡಿಕ್ಕಿ: ಇಬ್ಬರ ಸ್ಥಳದಲ್ಲೇ ಸಾವು
ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು
ಮನೆಯಲ್ಲಿ ಸಣ್ಣ ಫಿರಂಗಿ ಸ್ಫೋಟ: ಇಬ್ಬರ ಸಾವು, ಐವರಿಗೆ ಗಂಭೀರ ಗಾಯ
ಬ್ಯಾಂಕ್ ಆಫ್ ಬರೋಡಾ ಅಪ್ಲಿಕೇಶನ್ ಇನ್ ಸ್ಟಾಲ್ ಮಾಡಿಕೊಳ್ಳಿ ಈ ಲಾಭಗಳನ್ನು ಪಡೆಯಿರಿ