ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ 6 ವರ್ಷದ ಬಾಲಕ ಸಾವು
ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಕ್ಕಿ ಹಾಕಿಕೊಂಡು ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ.
ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತಪಟ್ಟ ಬಾಲಕನಾಗಿದ್ದು, ಗಾಳಿ ಪಟದ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ಕುತ್ತಿಗೆ ಕೊಯ್ದು ಹೋಗಿದ್ದು, ಏನಾಗಿದೆ ಅಂತ ತಂದೆಗೆ ತಿಳಿಯುವಷ್ಟರಲ್ಲೇ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ತಕ್ಷಣವೇ ಬಾಲಕನನ್ನು ಸ್ಥಳದಲ್ಲಿದ್ದವರು ಸೇರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಿಕಿತ್ಸೆ ನೀಡಲು ಬಂದ ವೈದ್ಯರು, ಬಾಲಕ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ.
ಪ್ರಕರಣ ಸಂಬಂಧ ಮಾಳ ಮಾರುತಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka