ಗಾನಕೋಗಿಲೆ ಲತಾ ಮಂಗೇಶ್ಕರ್ ಸ್ಥಿತಿ ಗಂಭೀರ
ಮುಂಬೈ: ಕರೊನಾ ಸೋಂಕಿನಿಂದ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಅವರ ಚಿಕಿತ್ಸೆ ಮುಂದುವರಿದಿದೆ.
ಕಳೆದೊಂದು ತಿಂಗಳಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಲತಾ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರುವುದಾಗಿ ವೈದ್ಯರು ಹೇಳಿದ್ದರು.
ಆದರೆ ಇದೀಗ ಪುನಃ ಆರೋಗ್ಯ ಸ್ಥಿತಿ ಹದಗೆಡುತ್ತಾ ಸಾಗಿರುವುದಾಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. 2019ರಲ್ಲಿ ಉಸಿರಾಟದ ತೊಂದರೆ ಅಥವಾ ಎದೆಯ ದಟ್ಟಣೆ ಶ್ವಾಸಕೋಶದ ಕಾಯಿಲೆಯಿಂದಾಗಿ ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರ ನಿರಂತರ ಪ್ರಯತ್ನದ ಪರಿಣಾಮವಾಗಿ ಅವರು ಕೊರೊನಾದಿಂದ ಗುಣಮುಖರಾಗಿದ್ದರೂ ಸಹ ಇನ್ನಿತರೆ ಆರೋಗ್ಯ ಸಮಸ್ಯೆಗಳ ಕಾರಣಕ್ಕೆ ಆಸ್ಪತ್ರೆಯಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು.
ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರೂ ಸಹ ಆತಂಕಪಡುವ ಅಗತ್ಯವಿಲ್ಲವೆಂದು ವೈದ್ಯರ ತಂಡ ಹೇಳಿದ್ದು, ಅಭಿಮಾನಿಗಳು ಅವರ ಚೇತರಿಕೆಗಾಗಿ ಪ್ರಾರ್ಥಿಸುವಂತೆ ಮನವಿ ಮಾಡಿದ್ದಾರೆ. ಕುಟುಂಬ ಸದಸ್ಯರೂ ಸಹ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಲೆಗೆ ಯತ್ನ: ನಾಲ್ವರು ಆರೋಪಿಗಳ ಬಂಧನ
ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್ ನಿಧನ
ರಾಹುಲ್ ಗಾಂಧಿ ಪ್ರವಾಸಿ ರಾಜಕಾರಣಿ: ಸಿ.ಟಿ.ರವಿ ವ್ಯಂಗ್ಯ
ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ: ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ
ವಿಶೇಷಚೇತನ ಪುತ್ರನನ್ನು ಕೊಂದು ದಂಪತಿ ಆತ್ಮಹತ್ಯೆ