ಗಣಪತಿ ವಿಸರ್ಜಿಸಿ ಬರುತ್ತಿದ್ದ ವೇಳೆ ವಿದ್ಯುತ್ ಶಾಕ್: ಮೂವರು ಸಾವು, 6 ಮಂದಿ ಗಂಭೀರ
ಚಿಕ್ಕಮಗಳೂರು: ಗಣಪತಿ ವಿಸರ್ಜಿಸಿ ಬರುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗಲಿ ಮೂವರು ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಬಳಿಯ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಜು(47), ರಚನಾ(35), ಪಾರ್ವತಿ(26) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವರದಿಗಳ ಪ್ರಕಾರ, ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಗಲಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಟ್ರ್ಯಾಕ್ಟರ್ ನ ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಘಟನೆ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka