ಗಂಡನ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋದ ಪತ್ನಿ
ಹೈದರಾಬಾದ್: ಪತಿಯನ್ನು ಪತ್ನಿಯೇ ಹತ್ಯೆಗೈದು ಆತನ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ಶರಣಾಗಿರುವ ಘಟನೆ ಆಂದ್ರಪ್ರದೇಶದ ಚಿತ್ತೂರು ಜಿಲ್ಲೆ ರೇಣಿಗುಂಟದಲ್ಲಿ ವರದಿಯಾಗಿದೆ.
ಪೊಲೀಸರ ಪ್ರಕಾರ, ವಸುಂಧರಾ ತಮ್ಮ ಮನೆಯಲ್ಲಿ ನಡೆದ ಜಗಳದಲ್ಲಿ ಪತಿ ರವಿಚಂದ್ರನ್ (53) ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ತಲೆ ಕತ್ತರಿಸಿದ್ದಾರೆ. ಬಳಿಕ ತಲೆಯನ್ನು ಬ್ಯಾಗ್ನಲ್ಲಿಟ್ಟುಕೊಂಡು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ಅಲ್ಲಿಗೆ ಕರೆತಂದು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಮೃತದೇಹವನ್ನು ಎಸ್‌ವಿ ವೈದ್ಯಕೀಯ ಕಾಲೇಜಿಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.ಈ ಘಟನೆ ಕುರಿತು ರೇಣಿಗುಂಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೋವಿಶೀಲ್ಡ್, ಕೋವ್ಯಾಕ್ಸಿನ್ ಮುಕ್ತ ಮಾರುಕಟ್ಟೆಗೆ ಡಿಜಿಸಿಐ ಶಿಫಾರಸು
ದ್ವಿಚಕ್ರ ವಾಹನ – ಲಾರಿ ಮುಖಾಮುಖಿ ಡಿಕ್ಕಿ; ಸವಾರ ಸಾವು
ಹೆಸರಾಂತ ಮಕ್ಕಳ ತಜ್ಞ ಡಾ.ದಿನೇಶ್ ಅವರ ಸ್ಮರಣಾರ್ಥ ಚಾಲ್ಸ್ ಆಂಬುನೆಲ್ಸ್ ನಿಂದ ಉಚಿತ ಸೇವೆ
ಬ್ರಹ್ಮಾವರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು
ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು: ದಕ್ಷಿಣ ಕನ್ನಡದ 5 ಶಾಲೆ, 1 ಪಿಯು ಕಾಲೇಜು ಸ್ಥಗಿತ