ನೀನು ಸುಂದರವಾಗಿಲ್ಲ ಎಂದು ಗಂಡನಿಂದ ನಿಂದನೆ: ಮನನೊಂದ ಮಹಿಳೆ ಆತ್ಮಹತ್ಯೆ
ಬೆಂಗಳೂರು: ಗಂಡ ಪದೇ ಪದೇ ನಿಂದಿಸುತ್ತಿರುವುದರಿಂದ ಮನನೊಂದು ಮೈಮೇಲೆ ಸೀಮೆ ಎಣ್ಣೆ ಸುರಿದು, ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಡಿಜೆ ಹಳ್ಳಿಯ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ.
ಅನಿಶಾ (33) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ. 18ರಂದು ಈ ಘಟನೆ ನಡೆದಿದೆ. ಮೂರು ವರ್ಷದ ಹಿಂದೆ ನಿಜಾಮುದ್ದೀನ್ ಜೊತೆಗೆ ಮದುವೆಯಾಗಿದ್ದ ದಂಪತಿಗೆ ಎರಡು ವರ್ಷ ಹಾಗೂ 6 ತಿಂಗಳ ಇಬ್ಬರು ಮಕ್ಕಳಿದ್ದಾರೆ.
ನೀನು ಕುರೂಪಿ, ಸುಂದರವಾಗಿಲ್ಲ ಎಂದು ಗಂಡ ನಿಂದನೆ ಮಾಡುತ್ತಾರೆ ಎಂದು ಮಹಿಳೆ ತನ್ನ ಕುಟುಂಬಸ್ಥರಲ್ಲಿ ಹೇಳಿಕೊಂಡಿದ್ದಳು. ಈ ವಿಷಯದಿಂದಲೇ ನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ.
ಪದೇ ಪದೇ ಗಂಡನ ನಿಂದನೆಯಿಂದ ಬೇಸರಗೊಂಡಿದ್ದ ಆಕೆ ಫೆ. 18ರಂದು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಬೆಂಕಿ ನಂದಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಅನಿಶಾ ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಟ ಚೇತನ್ ವಿರುದ್ಧ ದಾಖಲಾಗಿರುವ ದೂರಿನಲ್ಲೇನಿದೆ?
ಹಿಂದೂಗಳಿಗೆ ರಕ್ಷಣೆ ಒದಗಿಸಲಾಗದ ಸರ್ಕಾರ: ಬಿಜೆಪಿ ಸರ್ಕಾರದ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ
ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು