ಗಂಡಸ್ತನ ಪದ ಬಳಕೆ: ಎಚ್‌.ಡಿ.ಕುಮಾರಸ್ವಾಮಿ ವಿಷಾದ - Mahanayaka
6:16 PM Wednesday 11 - December 2024

ಗಂಡಸ್ತನ ಪದ ಬಳಕೆ: ಎಚ್‌.ಡಿ.ಕುಮಾರಸ್ವಾಮಿ ವಿಷಾದ

h d kumaraswamy
31/03/2022

ಬೆಂಗಳೂರು: ಗಂಡಸ್ತನ ಪದ ಬಳಸಿ ವಿವಾದಕ್ಕೆ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆ ವಿಷಾದ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಗಂಡಸ್ತನ ಪದ ಬಳಕೆ ಕುರಿತು ಸ್ಪಷ್ಟನೆ ನೀಡಿದ ಅವರು, ಮಾತನಾಡುವ ಭರದಲ್ಲಿ ಗಂಡಸ್ತದ ಬಗ್ಗೆ ಹೇಳಿದ್ದೇನೆ. ಕೂಡಲೇ ಅದನ್ನ ಸರಿ ಮಾಡಿಕೊಂಡಿದ್ದೇನೆ. ನನ್ನ ಪದ ಬಳಕೆಯಿಂದ ನೋವಾಗಿದ್ದರೆ ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈದ್ಗಾ ಮೈದಾನದಲ್ಲಿ ಅಮಾಯಕ ಮಕ್ಕಳ ಬಲಿದಾನವಾಯ್ತು. ಇದನ್ನು ನೋಡಿದ ಮೇಲೆ ನನಗೆ ರೋಷ ಉಕ್ಕಿ ಬಂತು. ಆವೇಶದಲ್ಲಿ ನಾನು ಗಂಡಸ್ತನ ಅಂತ ಮಾತನಾಡಿದ್ದೆ. ಆಗಲೇ ಪದ ಬಳಕೆ ಬಗ್ಗೆ ಅನ್ಯಥಾ ಭಾವಿಸಬೇಡಿ ಅಂದಿದ್ದೇನೆ. ಈ ಬಗ್ಗೆ ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಎರಡು ತಿಂಗಳಲ್ಲಿ ಸರ್ಕಾರ ಏನೂ ಮಾಡಿಲ್ಲ. ಅದಕ್ಕೆ ಆಕ್ರೋಶದಲ್ಲಿ ಅ ಪದ ಬಳಕೆ ಮಾಡಿದ್ದೇನೆ. ಸರ್ಕಾರ ಮೌನವಾಗಿ ಇದ್ದಿದ್ದಕ್ಕೆ ಇಷ್ಟು ದೊಡ್ಡದು ಆಗಿದೆ. ಸಮಾಜ ನಿರ್ನಾಮ ಮಾಡೋಕೆ ವೇದಿಕೆ ಸೃಷ್ಟಿ ಮಾಡ್ತಿದ್ದೀರಾ? ಯಾರೊಬ್ಬರ ಮೇಲೂ ಕ್ರಮಕೈಗೊಂಡಿಲ್ಲ. ನಿಮಗೆ ಶಾಂತಿ ಬೇಕಿಲ್ಲ, ಬೆಂಕಿ ಹಚ್ಚುವುದು ಬೇಕು ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹೆಂಡತಿ ಮೇಲಿನ ವ್ಯಾಮೋಹ: ಹೆತ್ತ ತಾಯಿಯನ್ನೇ ಕೊಂದ ಮಗ

ದುಲ್ಕರ್ ಸಲ್ಮಾನ್ ಮೇಲಿನ ನಿಷೇಧವನ್ನು  ಹಿಂಪಡೆದ ಫಿಯೋಕ್

ದೇಶಕ್ಕಾಗಿ ಪ್ರಾಣವನ್ನೂ ತೆರಬಲ್ಲೆ: ಅರವಿಂದ್‌ ಕೇಜ್ರಿವಾಲ್‌

ಚಪ್ಪಲಿ ಏಟು ತಿನ್ನಬಹುದು ಆದರೆ, ದುಡ್ಡೇಟು ತಿನ್ನೋಕೆ ಆಗಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

ಇತ್ತೀಚಿನ ಸುದ್ದಿ