ಗಣೇಶೋತ್ಸವಕ್ಕೆ ಅನುಮತಿ ನೀಡುವ ವಿಚಾರದಲ್ಲಿ ಮಹತ್ವದ ಸೂಚನೆ:  ಫ್ಲೆಕ್ಸ್, ಲೌಡ್ ಸ್ಪೀಕರ್, ಸುರಕ್ಷತೆ ವಿಚಾರಕ್ಕೆ ಹೆಚ್ಚಿನ ಒತ್ತು - Mahanayaka

ಗಣೇಶೋತ್ಸವಕ್ಕೆ ಅನುಮತಿ ನೀಡುವ ವಿಚಾರದಲ್ಲಿ ಮಹತ್ವದ ಸೂಚನೆ:  ಫ್ಲೆಕ್ಸ್, ಲೌಡ್ ಸ್ಪೀಕರ್, ಸುರಕ್ಷತೆ ವಿಚಾರಕ್ಕೆ ಹೆಚ್ಚಿನ ಒತ್ತು

udupi ganeshothsava sabhe
29/08/2022

ಉಡುಪಿ: ಜಿಲ್ಲೆಯಲ್ಲಿಆಗಸ್ಟ್ 31 ರಿಂದ ಆರಂಭವಾಗುವ ಗಣೇಶ ಚತುರ್ಥಿಹಬ್ಬದ ಸಂದರ್ಭದಲ್ಲಿ, ಗಣೇಶಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳನಡುವೆಯಾವುದೇಗೊಂದಲಗಳಿಗೆ ಆಸ್ಪದ ನೀಡದೇ, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.


Provided by

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗೌರಿ ಗಣೇಶಚತುರ್ಥಿ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಣೇಶ ಪ್ರತಿಷ್ಠಾಪನೆ ಸಂದರ್ಭದಲ್ಲಿ ಬ್ಯಾನರ್  ಮತ್ತು ಫ್ಲೆಕ್ಸ್’ಗಳನ್ನು ಅಳವಡಿಸುವ ಮುನ್ನಸಂಬಂಧಪಟ್ಟ ಆಯೋಜಕರಿಗೆ ಈ ಬಗ್ಗೆಅನುಮತಿ ಪಡೆಯುವಂತೆ ತಿಳಿಸಿ, ಅವುಗಳಲ್ಲಿ ಯಾವುದೇ ಆಕ್ಷೇಪಾರ್ಹವಾಕ್ಯಗಳಿಲ್ಲದಿರುವ ಬಗ್ಗೆ ಪರಿಶೀಲನೆ ನಡೆಸಿ ಬ್ಯಾನರ್, ಫ್ಲೆಕ್ಸ್ ಗೆ ಲೈಸೆನ್ಸ್ ನೀಡಿದ  ಸಂಖ್ಯೆ ಮತ್ತುಅಂತಿಮ ದಿನಾಂಕವನ್ನು ಮುದ್ರಿಸುವಂತೆ ಸೂಚಿಸಿ, ಅನುಮತಿ ನೀಡಿ, ಏಕಗವಾಕ್ಷಿ ಪದ್ಧತಿ ಮೂಲಕ ಆದಷ್ಟು ಶೀಘ್ರದಲ್ಲಿ ಎಲ್ಲಾ ಅನುಮತಿಗಳನ್ನು ನೀಡುವಂತೆ ತಿಳಿಸಿದರು.


Provided by

ಗಣೇಶಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ಅಗತ್ಯವಿರುವೆಡೆಗಳಲ್ಲಿ ಸೂಕ್ತಪೊಲೀಸ್ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆಗೆ ತಿಳಿಸಿದ ಜಿಲ್ಲಾಧಿಕಾರಿಗಳು, ವಿಸರ್ಜನಾಸ್ಥಳದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಸೂಕ್ತ ಬೆಳಕಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಸುರಕ್ಷಾಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿಪರಿಶೀಲಿಸಿ, ಅಗತ್ಯವಿದ್ದಲ್ಲಿ ಮುನ್ನೆಚ್ಚರಿಕಾಕ್ರಮವಾಗಿ ಸ್ಥಳೀಯ ಮುಳುಗು ತಜ್ಞರನ್ನು ಆಪ್ರದೇಶದಲ್ಲಿ ನಿಯೋಜಿಸುವಂತೆ ತಿಳಿಸಿದರು.

ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ನಗರಸ್ಥಳೀಯ ಸಂಸ್ಥೆಗಳು, ತಾಲೂಕು ಕೇಂದ್ರದಲ್ಲಿ ತಹಶೀಲ್ದಾರ್ ಗಳು ಮತ್ತು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಓಗಳು ಅಗತ್ಯ ಅನುಮತಿಗಳನ್ನು ನೀಡುವಂತೆ ತಿಳಿಸಿದಜಿಲ್ಲಾಧಿಕಾರಿಗಳು, ಎಲ್ಲಾಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆಸೂಚಿಸಿದರು.

ಶಾಂತಿಯುತ ಗಣೇಶ ಚತುರ್ಥಿ ಆಚರಣೆಗಾಗಿ, ಗಣೇಶಮೂರ್ತಿ ಪ್ರತಿಷ್ಠಾಪನೆಯಿಂದ ವಿಸರ್ಜನೆವರೆಗೆ ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ಮಚ್ಚಿಂದ್ರ, ಧ್ವನಿ ವರ್ಧಕ ಬಳಕೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ತಹಶೀಲ್ದಾರ್ ಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು  ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ