ಗಣೇಶೋತ್ಸವಕ್ಕೆ ಷರತ್ತು ಬದ್ಧ ಅವಕಾಶ | ಸಂಘಟಕರು ಈ ನಿಯಮಗಳನ್ನು ಪಾಲಿಸಲೇ ಬೇಕು! - Mahanayaka
4:52 PM Wednesday 10 - September 2025

ಗಣೇಶೋತ್ಸವಕ್ಕೆ ಷರತ್ತು ಬದ್ಧ ಅವಕಾಶ | ಸಂಘಟಕರು ಈ ನಿಯಮಗಳನ್ನು ಪಾಲಿಸಲೇ ಬೇಕು!

ganeshothsava
05/09/2021

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಷರತ್ತು ಬದ್ಧ ಅನುಮತಿ ನೀಡಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸರಳ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗಿದೆ.


Provided by

ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಆರ್.ಅಶೋಕ್, ಗರಿಷ್ಠ 5 ದಿನಗಳ ಕಾಲ ಚೌತಿ ಆಚರಿಸಬಹುದು. ನಗರಗಳಲ್ಲಿ  ವಾರ್ಡಿಗೊಂದು ಗ್ರಾಮಾಂತರ ಪ್ರದೇಶಗಳಲ್ಲಿ ಹಳ್ಳಿಗೊಂದು ಗಣೇಶನ ವಿಗ್ರಹ ಪ್ರತಿಷ್ಠಾಪಿಸಬಹುದು ಎಂದು ಹೇಳಿದರು.

ಪರಿಸರ ಸ್ನೇಹಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಬೇಕು. ಶಾಲಾ ಕಾಲೇಜುಗಳಲ್ಲಿ ಗಣಪತಿ ಕೂರಿಸುವಂತಿಲ್ಲ. ಗಡಿ ಜಿಲ್ಲೆಗಳಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇದ್ದಲ್ಲಿ ಗಣೇಶೋತ್ಸವ ಆಚರಿಸಬಹುದು. ಬಿಬಿಎಂಪಿ, ಜಿಲ್ಲಾಡಳಿತ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರವೇ ವಿಗ್ರಹ ಪ್ರತಿಷ್ಠಾಪನೆ ಮಾಡಬೇಕು ಎಂದು ಅವರು ತಿಳಿಸಿದರು.

ರಾತ್ರಿ 9 ಗಂಟೆಯ ನಂತರ ಯಾವುದೇ ಪೂಜಾ ಪುರಸ್ಕಾರ ನಡೆಸುವಂತಿಲ್ಲ. ಯಾವುದೇ ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಗಣೇಶೋತ್ಸವ ಆಯೋಜಕರು ಕಡ್ಡಾಯವಾಗಿ ಕೊವಿಡ್ ಲಸಿಕೆ ಪಡೆದಿರಬೇಕು ಎಂದು ಸಚಿವರು ಮಾಹಿತಿ ನೀಡಿದರು.

ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ಶಾಸಕರು ಹಾಗೂ ಬಿಜೆಪಿ ಪರ ಸಂಘಟನೆಗಳ ಒತ್ತಡಕ್ಕೆ ಕೊನೆಗೂ ಸರ್ಕಾರ ಮಣಿದಿದ್ದು, ಗಣೇಶೋತ್ಸವಕ್ಕೆ ಅವಕಾಶ ನೀಡಿದೆ. ಸರ್ಕಾರ ವಿಧಿಸಿರುವ ಷರತ್ತುಗಳು ಪಾಲಿಸಲು ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವುದು ತಿಳಿದು ಬಂದಿಲ್ಲ. ಈ ಷರತ್ತುಗಳು ಕೇವಲ ಕಾಟಾಚಾರಕ್ಕೆ ಸೀಮಿತವಾಗುತ್ತದೆಯೇ? ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ. ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ನಿಯಮಗಳಿಗೆ ಎಳ್ಳುನೀರು ಬಿಟ್ಟ ಬೆನ್ನಲ್ಲೇ ಇದೀಗ ಗಣೇಶೋತ್ಸವಕ್ಕೆ ಯಾವ ಮುಖ ಹೊತ್ತು ಷರತ್ತುಗಳನ್ನು ವಿಧಿಸುತ್ತದೆ ಎಂದು ಸಾರ್ವಜನಿಕರು ಕೂಡ ಪ್ರಶ್ನಿಸುತ್ತಿದ್ದಾರೆ.

ಇನ್ನಷ್ಟು ಸುದ್ದಿಗಳು…

ದೆಹಲಿ ಪೊಲೀಸ್ ಸಬಿಯಾ ಸೈಫಿ ಸಾಮೂಹಿಕ ಅತ್ಯಾಚಾರ, ಬರ್ಬರ ಹತ್ಯೆ | 50 ಬಾರಿ ಚುಚ್ಚಿದರು, ಅಂಗಾಂಗ ಕತ್ತರಿಸಿದರು!

ಹಾರ, ತುರಾಯಿ ಸನ್ಮಾನ ಪಡೆದ ಸಿಎಂ ಬಸವರಾಜ್ ಬೊಮ್ಮಾಯಿ! | ಆದೇಶ ಪಾಲಿಸಬೇಕಾದವರು ಯಾರು?

ಮಲಂಕರ ಧಮ೯ಕ್ಷೇತ್ರದ ಧಮಾ೯ಧ್ಯಕ್ಷ ಎಂ.ಆರ್.ಆಬ್ರಾಹಂರನ್ನು ಭೇಟಿ ಮಾಡಿದ ಐವನ್ ಡಿಸೋಜಾ

ಬೈಕು, ಟಿವಿ, ಫ್ರಿಡ್ಜ್ ಹೊಂದಿದವರ ಪಡಿತರ ಚೀಟಿ ರದ್ದಾಗುವುದೇ? | ಕೊನೆಗೂ ಸ್ಪಷ್ಟನೆ ನೀಡಿದ ಇಲಾಖೆ

ಶಾಸಕ ದಂಪತಿಗೆ ಹೂವಿನ ಮಳೆ ಸುರಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ನೋಟಿಸ್!

ಅಫ್ಘಾನಿಸ್ತಾನದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗಾಗಿ ಹುಡುಕಾಡುತ್ತಿರುವ ತಾಲಿಬಾನಿಗಳು | ಡೆತ್ ಸ್ಕ್ವಾಡ್ ಆರಂಭ

ಇತ್ತೀಚಿನ ಸುದ್ದಿ