ಚೌತಿಗೂ ಮೊದಲೇ ಬಿಬಿಎಂಪಿ ಕಚೇರಿ ಆವರಣಕ್ಕೆ ಬಂದ ಗಣಪ! | ಗಣೇಶೋತ್ಸವಕ್ಕೆ ನಿರ್ಬಂಧದ ವಿರುದ್ಧ ಪ್ರತಿಭಟನೆ
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧಗಳನ್ನು ಹೇರಿರುವ ಬಿಬಿಎಂಪಿಯ ಕ್ರಮವನ್ನು ಖಂಡಿಸಿ, ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಮತ್ತು ಇತರೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ವಾರ್ಡ್‌ಗೆ ಒಂದೇ ಗಣೇಶ ಮೂರ್ತಿ ಸ್ಥಾಪನೆ ಮಾಡಬೇಕು, ನಾಲ್ಕು ಅಡಿಗಿಂತ ಎತ್ತರ ಇರಬಾರದು, ಮೂರು ದಿನ ಮಾತ್ರ ಉತ್ಸವ ನಡೆಯಬೇಕು ಎಂಬ ಷರತ್ತುಗಳನ್ನು ವಿಧಿಸುವ ಮೂಲಕ ಹಬ್ಬದ ಆಚರಣೆಗೆ ಅಡ್ಡಿ ಮಾಡಲಾಗುತ್ತಿದೆ. ಈ ನಿರ್ಬಂಧಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು ಬಿಬಿಎಂಪಿ ಹಾಗೂ ಸರ್ಕಾರವನ್ನು ಒತ್ತಾಯಿಸಿದರು.
ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೆ ನಾವೇ ಸರ್ಕಾರದ ಆದೇಶವನ್ನು ಪಾಲಿಸುತ್ತಿದ್ದೆವು. ಆದರೆ, ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಆದರೂ ಅನೇಕ ಷರತ್ತುಗಳನ್ನು ವಿಧಿಸಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ನಗರದ ವಿವಿಧ ಗಣೇಶೋತ್ಸವ ಸಮಿತಿಗಳು, ಬಿಬಿಎಂಪಿ ಕೇಂದ್ರ ಕಚೇರಿಯ ಆವರಣಕ್ಕೇ ಗಣೇಶ ಮೂರ್ತಿಗಳನ್ನು ತಂದು ಪ್ರತಿಭಟನೆ ಮಾಡಿದರು.
ಇನ್ನಷ್ಟು ಸುದ್ದಿಗಳು…
ಕರ್ಮಠ ಮತಾಂಧತೆಯೂ ತಾಲಿಬಾನ್ ಸಂಸ್ಕೃತಿಯೂ | ನಾ ದಿವಾಕರ
ಜಾತಿ ತಾರತಮ್ಯ ನಿರ್ಮೂಲನೆ ಮಾಡುವ ಗ್ರಾಮಕ್ಕೆ 10 ಲಕ್ಷ ರೂಪಾಯಿ ಬಹುಮಾನ!
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಗೆ ಲಾರಿ ಡಿಕ್ಕಿ: ನಾಲ್ವರು ಮಹಿಳೆಯರು ಸಾವು, 15 ಮಂದಿಗೆ ಗಾಯ
ಡಾಬಾದಲ್ಲಿ ಊಟ ಮುಗಿಸಿ, ಬೈಕ್ ಹತ್ತಿದ ಸ್ನೇಹಿತರಿಬ್ಬರು ಕ್ಷಣ ಮಾತ್ರದಲ್ಲೇ ಸಾವು!
ವಿದ್ಯುತ್ ಚಾಲಿತ ವಾಹನ ಬಳಸಿದರೆ, ಪೆಟ್ರೋಲ್ ಬೆಲೆ ಇಳಿಯುತ್ತದೆ | ಸಚಿವ ನಾರಾಯಣ ಗೌಡ
“ಕಾರ್ ನನ್ನದು, ಯಾಕ್ರಿ ಟೋಯಿಂಗ್ ಮಾಡ್ತಿದ್ದೀರಿ” | ಟ್ರಾಫಿಕ್ ಪೊಲೀಸರನ್ನು ಗದರಿದ ಮಹಿಳೆ
ವಾನರ ಸೇನೆಯ ದಾಳಿ: ಎರಡನೇ ಮಹಡಿಯಿಂದ ಬಿದ್ದು ಬಿಜೆಪಿ ನಾಯಕನ ಪತ್ನಿ ಸಾವು