ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಗಣೇಶೋತ್ಸವ ವಿಚಾರ: ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದೇನು?
ಮಂಗಳೂರು: ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಹಿಂದಿನಿಂದಲೂ ಗಣೇಶೋತ್ಸವ ಮಾಡುತ್ತಾರೆ. ಆದರೆ ಈಗ ಯಾಕೆ ಸಮಸ್ಯೆ ಕಾಣಿಸಿಕೊಂಡಿದೆ. ಅಲ್ಲಿನ ವಿಚಾರದ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಸಿ ಇದ್ದಾರೆ. ಹೊರಗಿನವರು ತಲೆ ಹಾಕಬೇಕಾದ ಅಗತ್ಯ ಇಲ್ಲ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಮಸ್ಯೆಯಲ್ಲಿದ್ದಾರೆ. ಮುಂದಿನ ಶಿಕ್ಷಣ ಮತ್ತು ಉದ್ಯೋಗ ವಿಚಾರದಲ್ಲಿ ವಿದ್ಯಾರ್ಥಿಗಳು ತೊಂದರೆಯಲ್ಲಿದ್ದಾರೆ. ಆದರೆ ಈ ಬಗ್ಗೆ ಜನಪ್ರತಿನಿಧಿಗಳು ಯಾಕೆ ಮೌನ ವಹಿಸಿದ್ದಾರೆ ಗೊತ್ತಿಲ್ಲ ಎಂದು ಖಾದರ್ ಹೇಳಿದರು.
ನಿವೃತ್ತ ಶಿಕ್ಷಕರಿಗೆ ನಿವೃತ್ತಿ ವೇತನ ಸಿಕ್ಕಿಲ್ಲ. ನಿವೃತ್ತರಿಗೆ ಕೊಡಬೇಕಾದ ಹಣವನ್ನು ಕಟ್ಟಡ ಕಾಮಗಾರಿ ನಿರ್ವಹಿಸಿದ ಗುತ್ತಿಗಾರನಿಗೆ ನೀಡಲಾಗಿದೆ. ಶಿಕ್ಷಕರಿಗೆ ಸಂಬಳ ದೊರೆಯದೆ ಮೂರು ತಿಂಗಳಾಯಿತು. ವಿವಿ ಎ ಗ್ರೇಡ್ನಿಂದ ಬಿ ಗ್ರೇಡ್ ಗೆ ಇಳಿದಿದೆ ಇದರ ಬಗ್ಗೆ ಯಾರೂ ಕೂಡಾ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.