ಗಂಗಾ ಎಕ್ಸ್ಪ್ರೆಸ್ ವೇ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಶಂಕುಸ್ಥಾಪನೆ
ಶಹಜಾನ್ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ 594 ಕಿ.ಮೀ. ಉದ್ದದ ಸುಮಾರು ₹ 36,230 ಕೋಟಿ ರೂ. ವೆಚ್ಚದ ಗಂಗಾ ಎಕ್ಸ್‌ಪ್ರೆಸ್‌ವೇಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಗಂಗಾ ಎಕ್ಸ್ಪ್ರೆಸ್ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯುವಕರಿಗೆ ಉದ್ಯೋಗ ಪಡೆಯಲು ಇದು ಸಹಕಾರಿಯಾಗಿದೆ. ಜತೆಗೆ ಗಂಗಾ ಎಕ್ಸ್ಪ್ರೆಸ್ ಹೈವೇ ಕೆಲಸ ಇಂದಿನಿಂದಲೇ ಪ್ರಾರಂಭವಾಗಲಿದೆ ಎಂದರು.
ಮೀರತ್, ಹಾಪುರ್, ಬುಲಂದ್‌ಶಹರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್‌ಪುರ್, ಹರ್ದೋಯಿ, ಉನ್ನಾವೋ, ರಾಯ್‌ಬರೇಲಿ, ಪ್ರತಾಪ್‌ಗಢ್ ಮತ್ತು ಪ್ರಯಾಗ್‌ರಾಜ್‌ನಲ್ಲಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ. ಸುಮಾರು 600 ಕಿ.ಮೀ. ಉದ್ದದ ಈ ಎಕ್ಸ್‌ಪ್ರೆಸ್‌ವೇಗೆ 36,000 ಕೋಟಿ ರೂ.ಗೂ ಹೆಚ್ಚು ವೆಚ್ಚವಾಗಲಿದೆ. ಗಂಗಾ ಎಕ್ಸ್‌ಪ್ರೆಸ್‌ವೇ ಈ ಪ್ರದೇಶದಲ್ಲಿ ಹೊಸ ಕೈಗಾರಿಕೆಗಳನ್ನು ತರುತ್ತದೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭಾರತದ ಕುಸ್ತಿ ಸಂಸ್ಥೆ ಅಧ್ಯಕ್ಷನಿಂದ ಕುಸ್ತಿಪಟುವಿಗೆ ವೇದಿಕೆಯಲ್ಲೇ ಕಪಾಳಮೋಕ್ಷ
ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಹಿನ್ನೆಲೆ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ
ಪ್ರೈಮ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ
ರಾಷ್ಟ್ರಭಕ್ತರ ಪ್ರತಿಮೆ ಧ್ವಂಸ; ಪುಂಡರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ
ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು: ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್