ಯುಪಿಯಲ್ಲಿ ಎನ್ ಕೌಂಟರ್: ಗಾಯಗೊಂಡು ಡಬಲ್ ಮರ್ಡರ್ ಪ್ರಕರಣದಲ್ಲಿ ಬೇಕಾಗಿದ್ದ ದರೋಡೆಕೋರ ಸಾವು

14/12/2024

ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಪೊಲೀಸರೊಂದಿಗಿನ ಎನ್ ಕೌಂಟರ್ ನಲ್ಲಿ 39 ವರ್ಷದ ದರೋಡೆಕೋರನೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ದೆಹಲಿಯ ಹಾಶಿಮ್ ಬಾಬಾ ಗ್ಯಾಂಗ್ ನ ಪರಿಚಿತ ಸಹಚರ ಅನಿಲ್ ಅಲಿಯಾಸ್ ಸೋನು ಮಟ್ಕಾ ಯುಪಿ ಎಸ್ಟಿಎಫ್ ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕದ ಜಂಟಿ ತಂಡದೊಂದಿಗಿನ ಎನ್ ಕೌಂಟರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ರಾಷ್ಟ್ರ ರಾಜಧಾನಿಯ ಫರ್ಶ್ ಬಜಾರ್ ಪ್ರದೇಶದಲ್ಲಿ ವ್ಯಕ್ತಿ ಮತ್ತು ಅವನ ಸೋದರಳಿಯನ ಹತ್ಯೆ ಸೇರಿದಂತೆ ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಹಲವಾರು ಅಪರಾಧಗಳಿಗೆ ಸಂಬಂಧಿಸಿದಂತೆ ಮಟ್ಕಾ ಬೇಕಾಗಿದ್ದ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version