ಗಾಂಜಾ, ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್
ಉಡುಪಿ: ಟೌನ್ ಹಾಲ್ ಬಳಿಯ ರಿಕ್ಷಾ ನಿಲ್ದಾಣದ ಬಳಿ ಮಾದಕ ದ್ರವ್ಯ ಹಾಗೂ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅಪಾರ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಹಿರಿಯಡಕ ಗ್ರಾಮದ ಬೆಲ್ಲರ್ಪಾಡಿ ನಿವಾಸಿ 41ವರ್ಷದ ರಾಘವೇಂದ್ರ ದೇವಾಡಿಗ ಹಾಗೂ 80 ಬಡಗಬೆಟ್ಟು ಗ್ರಾಮದ ವಾಗ್ಲೆ ಸ್ಟೋರ್ ಬಳಿಯ ನಿವಾಸಿ 32 ವರ್ಷದ ಜಗದೀಶ್ ಪೂಜಾರಿ ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಜ.16ರಂದು ಉಡುಪಿಯ ಟೌನ್ ಹಾಲ್ ಸಮೀಪದ ರಿಕ್ಷಾ ನಿಲ್ದಾಣದ ಬಳಿ ದಾಳಿ ಮಾಡಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 45 ಸಾವಿರ ಮೌಲ್ಯದ 10 ಗ್ರಾಂ ತೂಕದ ಮಾದಕ ದ್ರವ್ಯ, 28 ಸಾವಿರ ರೂ ಮೌಲ್ಯದ 1 ಕೆ.ಜಿ 176 ಗ್ರಾಂ ತೂಕದ ಗಾಂಜಾ ಹಾಗೂ ನೋಂದಣಿ ಸಂಖ್ಯೆ ಇಲ್ಲದ ಸ್ಕೂಟರ್, 2 ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw