ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು!

vijaya kumar shetty
13/01/2023

ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಿಜಯ ಕುಮಾರ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಕುಂಟಿಕಾನ ಕ್ರಾಸ್ ಬಳಿಯಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಮಾದಕ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ.ರವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ ಕಾರನ್ನು ಪತ್ತೆ ಹಚ್ಚಿ, ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದವನನ್ನು ದಸ್ತಗಿರಿ ಮಾಡಿ ಸಾಗಾಟಕ್ಕೆ ಉಪಯೋಗಿಸಿದ ಕಾರು ಸಹಿತ 10.200 ಕೆ.ಜಿ. ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಸುಮಾರು 2,55,000 ರೂಪಾಯಿ ಮೌಲ್ಯದ 10.200 ಕೆ ಜಿ ಗಾಂಜಾ, ಮಾರುತಿ ಸ್ವಿಫ್ಟ್ ಕಾರು, ಒಂದು ಮೊಬೈಲ್, ನಗದು 500 ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಒಟ್ಟು ಮೌಲ್ಯ  5,65,500 ಆಗಬಹುದು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ವಿಜಯ ಕುಮಾರ್ ಎಂಬಾತನು ಈ ಹಿಂದೆ ಕೂಡಾ ಗಾಂಜಾ ಸಾಗಾಟ/ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದು, ಈತನ ವಿರುದ್ಧ ಚಿಕ್ಕಮಗಳೂರಿನಲ್ಲಿ ಹಾಗೂ ಉಡುಪಿಯಲ್ಲಿ ಒಟ್ಟು 2 ಪ್ರಕರಣ ದಾಖಲಾಗಿದ್ದು, ಸುಮಾರು 3 ತಿಂಗಳ ಹಿಂದೆ ಕಾರಾಗೃಹದಿಂದ ಬಿಡುಗಡೆಗೊಂಡಿದ್ದನು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version