ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ತೂರಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ
22/08/2022
ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿ ತೂರಾಡಿಕೊಂಡಿದ್ದ ವ್ಯಕ್ತಿಯನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಆ.20ರಂದು ನಡೆದಿದೆ.
ಸ್ಥಳೀಯ ನಿವಾಸಿ ನಾಗರಾಜ ಮೊಗವೀರ ಎಂಬಾತ ಅಮಲು ಪದಾರ್ಥ ಸೇವಿಸಿ ತೂರಾಡಿಕೊಂಡಿದ್ದು, ಮಾಹಿತಿ ತಿಳಿದು ದಾಳಿ ನಡೆಸಿದ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ವೈದ್ಯಕೀಯ ವರದಿಯಲ್ಲಿ ನಾಗರಾಜ ಮೊಗವೀರ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka