ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಕೇಸ್: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು - Mahanayaka
6:32 PM Wednesday 1 - January 2025

ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಕೇಸ್: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು

29/12/2024

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ  ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಹುಬ್ಬಳ್ಳಿಯ ಉಣಕಲ್ ನಿವಾಸಿ ಮಾಲಾಧಾರಿ ಶಂಕರ ಚವ್ಹಾಣ್ (30) ಮೃತಪಟ್ಟವರಾಗಿದ್ದಾರೆ.  ಕಳೆದ 7 ದಿನಗಳಿಂದ ಇವರು ಹುಬ್ಬಳ್ಳಿ ಆಸ್ಪತ್ರೆಯಲ್ಲಿ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಸಾಯಿನಗರದ ಅಚ್ಚವ್ವಳ ಕಾಲೋನಿಯಲ್ಲಿ ಈ ದುರಂತ ನಡೆದಿತ್ತು. ಗ್ಯಾಸ್ ಸೋರಿಕೆಯಾಗಿ ಬೆಂಕಿ  ಹತ್ತಿಕೊಂಡ ಹಿನ್ನೆಲೆ 9 ಮಂದಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಉಳಿದ 5 ನಾಲ್ವರು ಅಯ್ಯಪ್ಪ ವೃತಧಾರಿಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ