ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಹಿತ ಇಬ್ಬರು ಸಾವು: 12 ಮಂದಿಗೆ ಗಾಯ
ತಮಿಳುನಾಡು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿ 12 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ಕರಂಗಲ್ ನಲ್ಲಿ ನಡೆದಿದೆ.
ಇಲ್ಲಿನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಈ ವೇಳೆ ಕಟ್ಟಡ ಕುಸಿದು ಒಬ್ಬರು ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಎರಡು ಮನೆಗಳು ಕೂಡ ಕುಸಿದು ಬಿದ್ದು ಅಲ್ಲಿದ್ದವರು ಅವಶೇಷಗಳಡಿಯಲ್ಲಿ ಸಿಲುಕಿದ್ದರು.
ಇನ್ನೂ ತಕ್ಷಣವೇ ಅಗ್ನಿಶಾಮಕದಳ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕರ್ಮೇಘಂ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ನ್ನು ಕೊಚ್ಚಿ ಕೊಲೆಗೈದ ದರೋಡೆಕೋರರು!
ದೇವಸ್ಥಾನಕ್ಕೆ 20 ಸಾವಿರ ರೂಪಾಯಿ ದೇಣಿಗೆ ನೀಡಿದ ಭಿಕ್ಷುಕಿ!
ಸ್ಕೂಲ್ ಬಸ್ ತಪ್ಪಿ ಹೋಯಿತು ಎಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ!
ಮಂಗಳೂರು: 8 ವರ್ಷದ ಬಾಲಕಿಯ ಹತ್ಯೆ ಪ್ರಕರಣ | 20 ಮಂದಿ ಪೊಲೀಸ್ ವಶಕ್ಕೆ
ಸೆಲ್ಫಿ ವಿಡಿಯೋಗಾಗಿ ಪ್ರಾಣವನ್ನೇ ಕಳೆದುಕೊಂಡ ಬಾಲಕ
ಮಗಳ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದ ತಂದೆಯನ್ನು ಕೊಚ್ಚಿ ಕೊಂದ ಮಗಳ ಸ್ನೇಹಿತರು!