ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿರುವ ಪ್ರಕರಣದಲ್ಲಿ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಪ್ರಕಾಶ ಬಾರಕೇರ(42) ಮೃತಪಟ್ಟ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಅವಘಡದಲ್ಲಿ ಒಟ್ಟು 9 ಮಂದಿ ಗಾಯಗೊಂಡಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿತ್ತು. ಇದೀಗ 8 ಮಂದಿ ಸಾವನ್ನಪ್ಪಿದ್ದಾರೆ.
ಈ ಅವಘಡದಲ್ಲಿ ಶೇ.25ರಷ್ಟು ಸುಟ್ಟಗಾಯಗೊಂಡಿದ್ದ 12 ವರ್ಷದ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರವೇ ಬದುಕುಳಿದಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಕಳೆದ ಭಾನುವಾರ ಹುಬ್ಬಳ್ಳಿಯ ಅಚ್ಚವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಅವಘಡ ಸಂಭವಿಸಿತ್ತು. ಅಯ್ಯಪ್ಪ ಮಾಲಾಧಾರಿಗಳು ಮಲಗಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮುಗೇರಿ, ಲಿಂಗರಾಜ್ ಬಿರನೂರು, ಮಂಜುನಾಥ ವಾಗ್ಮೋಡೆ, ಶಂಕರ್ ಚಹ್ವಾಣ್, ತೇಜಸ್ವಿ ಸಾತ್ರೆ, ಪ್ರಕಾಶ್ ಬಾರಕೇರ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: