ಗ್ಯಾಸ್ ಟ್ಯಾಂಕ್ ಗೆ ಬಿದ್ದು ಇಬ್ಬರು ಕಾರ್ಮಿಕರ ದಾರುಣ ಸಾವು

ಉಜ್ಜೈನಿ: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನ ಬಾಟ್ಲಿಂಗ್ ಸ್ಥಾವರದಲ್ಲಿ ದುರಂತ ಸಂಭವಿಸಿದ್ದು, ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಟ್ಯಾಂಕ್ ಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಘಟ್ಟಿಯಾ ತಹಸಿಲ್‌ನಲ್ಲಿ ಈ ಘಟನೆ ನಡೆದಿದೆ. ಗುರುವಾರ ಕಾರ್ಮಿಕರು ಟ್ಯಾಂಕ್ ನ್ನು ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಆಯತಪ್ಪಿ ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಟ್ಯಾಂಕ್ ಗೆ ಬಿದ್ದಿದ್ದಾರೆ. ಪರಿಣಾಮವಾಗಿ ಅವರು ಸಾವನ್ನಪ್ಪಿದ್ದಾರೆ.
30 ವರ್ಷ ವಯಸ್ಸಿನ ರಾಜೇಂದ್ರ ಸಿಂಗ್ ಮತ್ತು 27 ವರ್ಷ ವಯಸ್ಸಿನ ಲಖನ್ ಸಿಂಗ್ ಮೃತಪಟ್ಟವರು ಎಂದು ಗುರುತಿಸಲಾಗಿದೆ ಎಂದು ಘಟನೆ ಸಂಬಂಧ ಉಪವಿಭಾಗಾಧಿಕಾರಿ ಆರ್.ಕೆ. ರಾಯ್ ತಿಳಿಸಿದ್ದಾರೆ.
ಘಟನೆ ನಡೆದ ಗ್ಯಾಸ್ ಟ್ಯಾಂಕ್ ಅನ್ನು ಖಾಲಿ ಮಾಡಲಾಗುತ್ತಿದ್ದು, ಪ್ರಕ್ರಿಯೆ ಪೂರ್ಣಗೊಂಡ ನಂತರ ಅವರ ಮೃತದೇಹಗಳನ್ನು ಹೊರತೆಗೆಯಲಾಗುತ್ತದೆ ಎಂದು ರಾಯ್ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ದೇವಸ್ಥಾನದ ಆವರಣದಲ್ಲಿಯೇ ಮುಖ್ಯ ಅರ್ಚಕನನ್ನು ಗುಂಡು ಹಾರಿಸಿ ಕೊಂದ ಯುವಕರು !
ಗ್ರಾಮಾಂತರ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಟ ವಿಜಯ್ ಅಭಿಮಾನಿಗಳ ಸಂಘ
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಆರೋಪ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್
ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ: ಶಿಕ್ಷಕನ ಕೃತ್ಯದ ವಿಡಿಯೋ ವೈರಲ್ ಮಾಡಿದ ವಿದ್ಯಾರ್ಥಿಗಳು
ಅಮಾನವೀಯ ಘಟನೆ: ಹೊಲದಲ್ಲಿ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ