ಇಂದು ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಗೆ ಸೇರ್ಪಡೆ
ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಪತ್ನಿ ಮಾಜಿ ಸಿಎಂ ಎಸ್. ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರು ಏಪ್ರಿಲ್ 28ರಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿ ತಿಳಿಸಿದೆ.
ಇಂದು 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಬಳಿಕ ಅವರು ರಾಜಕೀಯದಲ್ಲಿ ತಟಸ್ಥವಾಗಿದ್ದರು. ಅವರ ಸಹೋದರ ಮಧು ಬಂಗಾರಪ್ಪ ಅವರು ಜೆಡಿಎಸ್ ನಲ್ಲಿದ್ದು, ಬಳಿಕ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಸಹೋದರನಿಗೆ ಪ್ರಚಾರ ನೀಡುವ ನಿಟ್ಟಿನಲ್ಲಿ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಕುತೂಹಲ ಕೂಡ ಸೃಷ್ಟಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw