ಜ್ಞಾನವಾಪಿ ಪ್ರಕರಣ: ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ವಾರಾಣಸಿ ಕೋರ್ಟ್ ಅನುಮತಿ

ಜ್ಞಾನವಾಪಿ ಮಸೀದಿ ಕೇಸ್‌ನಲ್ಲಿ ಹಿಂದೂಪರ ಅರ್ಜಿದಾರರಿಗೆ ಜಯ ಸಿಕ್ಕಿದಂತಾಗಿದೆ. ಮಸೀದಿ ಸಮೀಕ್ಷೆ ಭಾಗವಾಗಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತ ಆದೇಶವನ್ನು ಜಿಲ್ಲಾ ನ್ಯಾಯಾಲಯ ಪ್ರಕಟಿಸಿದ್ದು ಎಎಸ್ ಐ ಸಮೀಕ್ಷೆ ಅರ್ಥಾತ್ ಪುರಾತ್ವ ಇಲಾಖಾ ಸಮೀಕ್ಷೆ ನಡೆಸುವಂತೆ ಸೂಚಿಸಿದೆ.
ಈ ಕುರಿತು ಹಿಂದೂಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರಿಯಿಸಿ, ಶೃಂಗಾರ ಗೌರಿ ಜ್ಞಾನವಾಪಿ ಪ್ರಕರಣದಲ್ಲಿ ನನ್ನ ಅರ್ಜಿಯನ್ನು ಅನುಮೋದಿಸಲಾಗಿದೆ ಎಂದು ತಿಳಿಸಲಾಗಿದೆ.
ಮಸೀದಿ ಸಂಕೀರ್ಣದ ಒಳಗಿರುವ ವಾಜುಖಾನಾ ಟ್ಯಾಂಕನ್ನು ಹೊರತುಪಡಿಸಿ ಎಎಸ್ಐ ಸಮೀಕ್ಷೆಯನ್ನು ನಡೆಸುವಂತೆ ಕೋರ್ಟ್ ಸೂಚಿಸಿದೆ ಎಂದು ವಕೀಲ ವಿಷ್ಣು ಶಂಕರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಈ ವರ್ಷದ ಮೇ ತಿಂಗಳಲ್ಲಿ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಸಂಪೂರ್ಣ ಆವರಣವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಮೀಕ್ಷೆಗೊಳಪಡಿಸಬೇಕೆಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಿತ್ತು. ಅರ್ಜಿ ವಿಚಾರಣೆ ನಮತರ ಇದೀಗ ಪುರಾತತ್ವ ಇಲಾಖಾ ಸಮೀಕ್ಷೆಗೆ ಕೋರ್ಟ್ ಅನುಮತಿ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw