ಜೋಕಾಲಿ ಆಡುತ್ತಿದ್ದ ವೇಳೆ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಬಾಲಕಿ ಸಾವು
ಕಾರ್ಕಳ: ಜೋಕಾಲಿ ಆಡುತ್ತಿದ್ದ ಬಾಲಕಿಯೊಬ್ಬಳು ಕುತ್ತಿಗೆಗೆ ಸೀರೆ ಸುತ್ತಿಕೊಂಡು ಮೃತಪಟ್ಟ ಘಟನೆ ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಮೇ 26ರಂದು ಸಂಜೆ ವೇಳೆ ನಡೆದಿದೆ.ಮೃತರನ್ನು ಅಂತೊಟ್ಟು ನಿವಾಸಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ (9) ಎಂದು ಗುರುತಿಸಲಾಗಿದೆ.
ಈಕೆ ನೆರೆಮನೆಯ ಸಂಬಂಧಕ ಮನೆಯ ಬಳಿ ಇತರರೊಂದಿಗೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುತ್ತಿದ್ದು, ಈ ವೇಳೆ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಮಾನ್ವಿಯ ಕುತ್ತಿಗೆಗೆ ಸುತ್ತಿಕೊಂಡು ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw