ಮೊಬೈಲ್ ನೋಡಬೇಡ ಎಂದಿದ್ದಕ್ಕೆ 7 ಅಂತಸ್ತಿನ ಕಟ್ಟಡದಿಂದ ಜಿಗಿದ ಬಾಲಕಿ!
ಮುಂಬೈ: ಮೊಬೈಲ್ ನೋಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ನೊಂದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾದ ಘಟನೆ ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದಿದೆ.
ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಪ್ರಕರಣ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು, ಬಾಲಕಿಯ ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ ಎಂದಿದ್ದಾರೆ.
ಬಾಲಕಿ ಹೆಚ್ಚು ಮೊಬೈಲ್ ಬಳಕೆ ಮಾಡುತ್ತಿದ್ದು, ಹೀಗಾಗಿ ಆಕೆಯ ಕೈಯಿಂದ ಕುಟುಂಬಸ್ಥರು ಮೊಬೈಲ್ ಕಿತ್ತುಕೊಂಡಿದ್ದರು. ಈ ಘಟನೆಯಿಂದ ಆಕೆ ಮನನೊಂದಿದ್ದಳು ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw