ಬಾಳಿ ಬದುಕ ಬೇಕಾದ ಬಾಲಕಿ ಕಲುಷಿತ ನೀರಿಗೆ ಬಲಿ: ಸಮಸ್ಯೆ ಬಗೆಹರಿಯಲು ಇನ್ನೆಷ್ಟು ಜೀವಗಳ ಬಲಿ ಬೇಕು?
ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿಯಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ 10 ವರ್ಷದ ಬಾಲಕಿ ಕೊನೆಯುಸಿರೆಳೆದಿದ್ದಾಳೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳ ಹಿಂದೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ 30ಕ್ಕೂ ಹೆಚ್ಚು ಜನರಿಗೆ ವಾಂತಿ ಬೇಧಿಯಾಗಿದ್ದು ಒಂದೂವರೆ ವರ್ಷದ ಮಗು ತಾವರಗೇರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿತ್ತು. ಹಾಗೂ ಹೊನ್ನಮ್ಮ ಎಂಬ ವೃದ್ದೆ ಸಾವನ್ನಪ್ಪಿದ್ರು. ಆದರೆ ಕೊಪ್ಪಳ ಡಿಹೆಚ್ ಓ ವೃದ್ಧೆಗೆ ಬೇರೆ ಬೇರೆ ಕಾಯಿಲೆಗಳಿದ್ದವು ಎಂದಿದ್ದರು. ಇದೀಗ ಮತ್ತೋರ್ವಳು ಬಾಲಕಿ ಕಲುಷಿತ ನೀರಿಗೆ ಬಲಿಯಾಗಿದ್ದಾಳೆ.
ಈರಪ್ಪ ಬೆಳಗಲ್(10) ಮೃತಪಟ್ಟ ಬಾಲಕಿಯಾಗಿದ್ದಾಳೆ. ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವೆನೆಯಿಂದ 15 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ರು. ಇನ್ನು ಮೃತ ಬಾಲಕಿಗೆ ನಿನ್ನೆ ರಾತ್ರಿ ವಾಂತಿ ಬೇಧಿ ಕಾಣಿಸಿಕೊಂಡಿತ್ತು. ರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗಿರಲಿಲ್ಲ. ಇಂದು ಬೆಳಿಗ್ಗೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯ್ತು. ಆದರೆ ಮನೆಯಲ್ಲಿಯೇ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಾಲಕಿ ಆಸ್ಪತ್ರೆಗೆ ಕರೆದುಕೊಂಡು ಬರುವ ಮೊದಲೇ ಮೃತಪಟ್ಟಿದ್ದಳು.
ಅಧಿಕಾರಿಗಳು ಸಭೆಯ ಮೇಲೆ ಸಭೆ ನಡೆಸಿದ್ರೂ ಯಾವುದೇ ಕ್ರಮ ಆಗ್ತಾ ಇಲ್ಲ, ಬಾಳಿ ಬದುಕ ಬೇಕಾದ ಬಾಲಕಿ ಪ್ರಾಣ ಬಿಟ್ಟಿದ್ದಾಳೆ. ಸರ್ಕಾರ ಕಲುಷಿತ ನೀರಿನ ಸಮಸ್ಯೆಯನ್ನು ನಿವಾರಿಸಲು ಇನ್ನೆಷ್ಟು ಜೀವಗಳ ಬಲಿ ಬೇಕು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಕಲುಷಿತ ನೀರಿನ ಸಮಸ್ಯೆಯನ್ನು ಬಗೆ ಹರಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇಲ್ಲಿನ ಜನರಿಗೆ ಪೂರೈಕೆ ಮಾಡುತ್ತಿರುವ ನೀರಿ ಕಲುಷಿತವೇ ಅಲ್ಲ ಎಂದು ಅಧಿಕಾರಿಗಳು ವಾದಿಸುವುದೇ ಆದಲ್ಲಿ ಇಲ್ಲಿನ ಜನರಿಗೆ ಪೂರೈಕೆ ಮಾಡುತ್ತಿರುವ ನೀರನ್ನು ನೀವೂ ಕುಡಿದು ಪರೀಕ್ಷಿಸಿ ಆಗಲಾದರೂ ಜನರನ್ನು ನಂಬುತ್ತೀರಿ ಅನ್ನೋ ಆಕ್ರೋಶದ ಮಾತುಗಳು ಕೇಳಿ ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw