ಹಾಸ್ಟೆಲ್ ವಿದ್ಯಾರ್ಥಿನಿಯರ ವಿಡಿಯೋ ಲೀಕ್ ಪ್ರಕರಣ: ಹಾಸ್ಟೆಲ್ ತೊರೆದ ವಿದ್ಯಾರ್ಥಿನಿಯರು
ಚಂಡೀಗಡ: ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಡ ವಿಶ್ವವಿದ್ಯಾಲಯವನ್ನು 5 ದಿನಗಳ ಕಾಲ ಬಂದ್ ಮಾಡಲಾಗಿದೆ. ಈ ನಡುವೆ ಘಟನೆಯಿಂದ ಭೀತರಾಗಿರುವ ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆದು ತಮ್ಮ ಮನೆಗಳಿಗೆ ತೆರಳಿದ್ದಾರೆ.
ಸೆಪ್ಟಂಬರ್ 24ರವರೆಗೆ ಕಾಲೇಜನ್ನು ಬಂದ್ ಮಾಡಲಾಗಿದೆ. ಇದರ ಬೆನ್ನಲ್ಲೇ ಲಗೆಜ್ ಪ್ಯಾಕ್ ಮಾಡಿಕೊಂಡು ವಿದ್ಯಾರ್ಥಿನಿಯರು ತಮ್ಮ ಊರಿಗೆ ತೆರಳಿದ್ದಾರೆ.
ವಿದ್ಯಾರ್ಥಿನಿಯರ ಸ್ನಾನದ ವಿಡಿಯೋ ವೈರಲ್ ಮಾಡಿರುವ ವಿದ್ಯಾರ್ಥಿನಿ ಹಾಗೂ ಆಕೆಯ ಬಾಯ್ ಫ್ರೆಂಡ್ ನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಪೊಲೀಸರು ವಶಕ್ಕೆ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:
ಹಾಸ್ಟೆಲ್ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಮಾಡಿ ವೈರಲ್ ಮಾಡಿದ ವಿದ್ಯಾರ್ಥಿನಿ!
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka