3 ಬಿಲ್ಲವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ಕೊಡಿ: ಬಿಲ್ಲವ ಮುಖಂಡರ ಆಗ್ರಹ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಠ 3 ಬಿಲ್ಲವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಬಿಲ್ಲವ ಮುಖಂಡರು ಆಗ್ರಹಿಸಿದ್ದಾರೆ.
ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಗಣೇಶ್ ಪೂಜಾರಿ ಗಂಜಿಮಠ, ಕಾಂಗ್ರೆಸ್ ಮುಖಂಡ ಉಲ್ಲಾಸ್ ಕೋಟ್ಯಾನ್ ಪುತ್ತೂರು ಅವರು, ದ.ಕ. ಜಿಲ್ಲೆಯಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರು ,ಸುಳ್ಯ ಹೊರತುಪಡಿಸಿ ಉಳಿದ 7 ವಿಧಾನಸಭೆ ಕ್ಷೇತ್ರದಲ್ಲಿ ನಿರ್ಣಾಯಕರಾಗಿದ್ದಾರೆ ಎಂದರು.
ಬಿಲ್ಲವ ಸಮುದಾಯದ ಜನಾರ್ದನ ಪೂಜಾರಿಯವರ ನಾಯಕತ್ವಕ್ಕೆ ಗೌರವ, ಬೆಂಬಲ ನೀಡುತ್ತಿತ್ತು. ಆದರೆ ಅವರ ಅನಾರೋಗ್ಯದ ಅನಂತರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಓರ್ವ ಬಿಲ್ಲವ ಅಭ್ಯರ್ಥಿಗೆ ಅವಕಾಶ ನೀಡಲಾಯಿತು. ಬಿಲ್ಲವ ಸಮುದಾಯಕ್ಕೆ ಸಮರ್ಪಕ ನಾಯಕತ್ವ ಇಲ್ಲದೇ ಬಿಲ್ಲವ ಮತದಾರರು ಕಾಂಗ್ರೆಸೇತರ ಪಕ್ಷಗಳತ್ತ ಒಲವು ತೋರಿದ್ದಾರೆ. ಇದನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw