ರೋಹಿತ್ ಚಕ್ರತೀರ್ಥ ಭಾಗವಹಿಸಿದ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ ಬಿಲ್ಲವ ಸಂಘಟನೆಗಳು

billava protest
11/02/2023

ಉಡುಪಿ:  ಶ್ರೀ ನಾರಾಯಣ ಗುರುಗಳಿಗೆ ಪಠ್ಯಪುಸ್ತಕದಲ್ಲಿ ಅಗೌರವ ತೋರಿದ ರೋಹಿತ್ ಚಕ್ರತೀರ್ಥ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಬಿಲ್ಲವ ಸಂಘಟನೆಗಳು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ, ಗೋ ಬ್ಯಾಕ್ ರೋಹಿತ್ ಚಕ್ರತೀರ್ಥ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ.

ಕರ್ನಾಟಕ ರಾಜ್ಯ ಯಕ್ಷಗಾನ ಸಮ್ಮೇಳನಕ್ಕೆ ಆಗಮಿಸಿದ್ದ ರೋಹಿತ್ ಚಕ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸಮ್ಮೇಳನದ ಮುಖ್ಯ ದ್ವಾರದ ಬಳಿಯಲ್ಲಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿ, ರೋಹಿತ್ ಚಕ್ರತೀರ್ಥ ವಿರುದ್ಧ ಘೋಷಣೆ ಕೂಗಿದರು.

ಸಮ್ಮೇಳನದ ದ್ವಾರಕ್ಕೆ ಪ್ರತಿಭಟನಾಕಾರರು ಬರುತ್ತಿದ್ದಂತೆಯೇ ಪೊಲೀಸರು ತಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.  ಸಮ್ಮೇಳನದ ಆವರಣಕ್ಕೆ ಹೋಗಲು ನಮಗೆ ಅನುಮತಿ ನೀಡಬೇಕು ಎಂದು ಬಿಲ್ಲವ ಮುಖಂಡರು ಒತ್ತಾಯಿಸಿದರು. ಆದರೆ ಪೊಲೀಸರು ಇದಕ್ಕೆ ಒಪ್ಪದೇ ಇದ್ದಾಗ, ಪ್ರತಿಭಟನಾಕಾರರು ಸಮ್ಮೇಳನದ ಆವರಣಕ್ಕೆ ನುಗ್ಗಲು ಯತ್ನಿಸಿದರು.

billava protest

ಇದೇ ವೇಳೆ ಕಾರ್ಯಕ್ರಮದ ಸಂಘಟಕರನ್ನು ಸ್ಥಳಕ್ಕೆ ಕರೆಯುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.  ಬಳಿಕ ಪ್ರತಿಭಟನಾಕಾರರನ್ನು ಪೊಲೀಸರು ಸಮಾಧಾನಪಡಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version