ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?: ಕಿಶೋರ್ ಕುಮಾರ್ ಪ್ರಶ್ನೆ
ಕಾಂತಾರದ ವಿಚಾರವಾಗಿ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸತ್ತಿದ್ದಾನೆ ಅನ್ನೋ ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂತಾರ ಚಿತ್ರದಲ್ಲಿ ಖಡಕ್ ಫಾರೆಸ್ಟ್ ಆಫೀಸರ್ ಆಗಿ ಕಾಣಿಸಿಕೊಂಡ ಕಿಶೋರ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.
ಕಿಶೋರ್ ಕುಮಾರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೀಗೆ ಬರೆದುಕೊಂಡಿದ್ದಾರೆ:
ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.
ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ. ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ.
ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ ಎಂದು ಕಿಶೋರ್ ಕುಮಾರ್ ಬರೆದುಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw